ನವದೆಹಲಿ, 15 ಜೂನ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಜೂನ್ 18ರವರೆಗೆ ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಜೂನ್ 16-17 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆಯುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ
ಶೃಂಗಸಭೆಯಲ್ಲಿ ಇಂಧನ ಭದ್ರತೆ, ಕೃತಕ ಬುದ್ಧಿಮತ್ತೆ ಮತ್ತು ತಾಂತ್ರಿಕ ನಾವೀನ್ಯತೆ ಕುರಿತ ಚರ್ಚೆ ನಡೆಯಲಿದೆ. ಮೊದಲು ಸೈಪ್ರಸ್ಗೆ ಭೇಟಿ ನೀಡುವ ಅವರು ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರನ್ನು ಭೇಟಿಯಾಗಿ ವ್ಯಾಪಾರ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಕ್ರೊಯೇಷಿಯಾಕ್ಕೆ ಭೇಟಿ ನೀಡಿ ಪ್ರಧಾನಮಂತ್ರಿ ಆಂಡ್ರೆಜ್ ಪ್ಲೆಂಕೋವಿಕ್ ಮತ್ತು ಅಧ್ಯಕ್ಷ ಜೋರಾನ್ ಮಿಲನೋವಿಕ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa