ಹೊಸಪೇಟೆ, 17 ಜೂನ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ವ್ಯಕ್ತಿ ಸಂಬಂಧಿತ ಅನುಕೂಲಗಳಿಗೆ ಸಹಾಯ ಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಸಪೇಟೆ ನಗರದ ಎಂ.ಬಿ.ಬಿ.ಎಸ್, ಬಿ.ಇ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗಾಗಿ ರೂ.50 ಸಾವಿರ ಮೀರದಂತೆ ಹಾಗೂ ಬಡಜನರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸಹಾಯಧನ ನೀಡಲಾಗುವುದು.
ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದು. ಹೊಸಪೇಟೆ ನಗರದ ಸರ್ಕಾರಿ ಶಾಲೆ, ಕಾಲೇಜುಗಳು, ಸರ್ಕಾರದ ವೃತ್ತಿಪರ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದು.
ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ನೀಡಲಾಗುತ್ತದೆ. ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಅತಿ ಕಡುಬಡವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಫಲಾನುಭವಿಗಳು ಕುಟುಂಬದ ಆದಾಯ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ನೀಡಿ ಸಹಾಯ ಧನ ಪಡೆಯಬಹುದಾಗಿದೆ.
ಅರ್ಹ ಫಲಾನುಭವಿಗಳು ಜೂ.13 ರಿಂದ ಜುಲೈ.15 ರೊಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಯೋಜನೆಯ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ನಗರಸಭೆ ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ www.hospetcity.gov.in ಜಿಲ್ಲಾ ವೆಬ್ಸೈಟ್ ಅನ್ನು ವೀಕ್ಷಣೆ ಮಾಡಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್