ರಾಯಚೂರು, 19 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಟೇಬಲ್ ಟೆನ್ನಿಸ್ ಸಂಸ್ಥೆ ರಾಯಚೂರು ಹಾಗೂ ರೋಟರಿ ಕ್ಲಬ್ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಟೇಬಲ್ ಟೆನ್ನಿಸ್ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ರಾಯಚೂರು ಜಿಲ್ಲೆಯ ಕ್ರೀಡಾಪಟುಗಳಿಗೆ ಮಾತ್ರ ಜೂನ್ 28 ಮತ್ತು ಜೂನ್ 29ರ ಬೆಳಿಗ್ಗೆ 8.30ಕ್ಕೆ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾ ಪಂದ್ಯಾವಳಿಗಳನ್ನು ನಗರದ ಒಳಾಂಗಣ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಜೂನ್ 28ರಂದು 14 ವರ್ಷದೊಳಗಿನವರಿಗೆ ಟೇಬಲ್ ಟೆನ್ನಿಸ್ ಪಂದ್ಯ ವೈಯಕ್ತಿಕ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕವಾಗಿ ನಡೆಯಲಿದೆ. ಜೂನ್ 19ರಂದು ನಡೆಯುವ ಸ್ಪರ್ಧೆಗೆ ವಯಸ್ಸಿನ ನಿರ್ಭಂಧವಿರುವುದಿಲ್ಲ. ಅಂದು ಟೇಬಲ್ ಟೆನ್ನಿಸ್, ವೈಯಕ್ತಿಕ ಮತ್ತು ಡಬಲ್ಸ್ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯಲಿವೆ.
ಪಂದ್ಯಾವಳಿಗಳಲ್ಲಿ ಭಾಗವಹಿಸುವುದು ಉಚಿತವಾಗಿದೆ. ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ವಿಜೇತರಿಗೆ ಪ್ರಮಾಣ ಪತ್ರ, ಫದಕ ಮತ್ತು ಟ್ರಾಫಿ ನೀಡಲಾಗುವುದು. ಜಿಲ್ಲೆಯ ಟೇಬಲ್ ಟೆನ್ನಿಸ್ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಅಥವಾ ವಿ ಲಕ್ಷ್ಮಿನಾರಾಯಣ ಮೋ ಸಂಖ್ಯೆ : 9845861363, ವೀರಣ್ಣ ಮೋ ಸಂ.9448837766 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಈರೇಶ್ ನಾಯಕ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್