ನವದೆಹಲಿ, 19 ಜೂನ್ (ಹಿ.ಸ.):
ಆ್ಯಂಕರ್:
ಅನಾರೋಗ್ಯದಿಂದಾಗಿ ನಾಲ್ಕು ದಿನಗಳ ಕಾಲ ಚಿಕಿತ್ಸೆ ಪಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜೂನ್ 15ರಂದು ಹೊಟ್ಟೆ ಸಂಬಂಧಿತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ರಾಹುಲ್ ಗಾಂಧಿ, ಇಂದು ತಮ್ಮ ಜನ್ಮದಿನದ ದಿನವೇ, ತಾಯಿಯನ್ನು ಆಸ್ಪತ್ರೆಗೆ ಭೇಟಿ ನೀಡಿ ಮನೆ ಕರೆದುಕೊಂಡು ಹೋದರು.
ವೈದ್ಯರು ಸೋನಿಯಾ ಗಾಂಧಿಗೆ ವಿಶ್ರಾಂತಿ ಅಗತ್ಯ ಎಂದು ಸಲಹೆ ನೀಡಿದ್ದು,ಅವರ ಸ್ಥಿತಿ ಈಗ ಸ್ಥಿರವಾಗಿದೆ.
78 ವರ್ಷದ ಸೋನಿಯಾ ಗಾಂಧಿ ಅವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ಚಿಕಿತ್ಸೆಗಾಗಿ ನಿಗಾದಲ್ಲಿ ಇರಿಸಲಾಗಿತ್ತು.
ಈ ತಿಂಗಳಲ್ಲಿ ಇದು ಎರಡನೇ ಬಾರಿ ಅವರು ಆಸ್ಪತ್ರೆಗೆ ದಾಖಲು ಆಗಿದ್ದು,ಜೂನ್ 7ರಂದು ಶಿಮ್ಲಾದಲ್ಲಿ ಎಂಆರ್‌ಐ ಮಾಡಲಾಗಿತ್ತು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa