ಕೋಲಾರ, ಜೂನ್ ೦೨ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಜೂನ್ ೧೨ರಂದು ನಡೆಯುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಹಿನ್ನೆಲೆಯ ನಾನಾ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ಧತೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಆರ್.ರವಿ ಅವರು ಬೇರೆ ಬೇರೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿಯ ವಿರೋಧಿ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂನ್ ೧೨ರಂದು ಕೋಲಾರ ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಸಹ ವಿಶ್ವ ಬಾಲ ಕಾರ್ಮಿಕ ಪದ್ಧತಿಯ ವಿರೋಧಿ ದಿನವನ್ನು ಆಚರಣೆ ಮಾಡಬೇಕು. ಈ ಬಗ್ಗೆ ಆಯಾ ತಹಸೀಲ್ದಾರರು ಆಯಾ ತಾಲೂಕುಗಳಲ್ಲಿ ಸಿದ್ಧತೆಗಳನ್ನು ಕೈಗೊಳ್ಳಬೇಕು. ಆಯಾ ತಾಲೂಕುಗಳಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಸ್ಥಳೀಯ ತಾಲೂಕು, ಹೋಬಳಿ ಮತ್ತು ಗ್ರಾಮಮಟ್ಟದ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳ ಸಹಕಾರೊಂದಿಗೆ ಶಿಕ್ಷಣ ಇಲಾಖೆಯ ಶಾಲೆಯ ಮಕ್ಕಳು, ಎನ್.ಸಿ.ಸಿ., ಎನ್‌ಎಸ್.ಎಸ್ ಹಾಗೂ ಜಿಲ್ಲೆಯಾದ್ಯಂತ ಎಲ್ಲ ಕಡೆಗೆ ಪ್ರಭಾತ ಪೇರಿ ನಡೆಸಿ ಮಕ್ಕಳನ್ನು ಶಾಲೆಗೆ ಸೇರಿಸುವಂತೆ, ಮಕ್ಕಳನ್ನು ದುಡಿಯಲು ಹಚ್ಚಬಾರದು ಎಂದು ಜನಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು.
ಆಯಾ ತಹಸೀಲ್ಧಾರರು ಈಗಿನಿಂದಲೇ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಷಯ ತಿಳಿಸಿ ಬಿಇಓ ಅವರ ಮೂಲಕ ಎಲ್ಲ ಶಾಲೆಗಳಿಗೆ ಪತ್ರ ಬರೆಯಿಸಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪ್ರಭಾತಪೇರಿ ನಡೆಸಲು ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಬರೀ ಜಾಗೃತಿ ಮೂಡಿಸಿದರಷ್ಟೇ ಸಾಲದು ಸಂಬAಧಿಸಿದ ಅಧಿಕಾರಿಗಳು ಅಥವಾ ತಹಸೀಲ್ದಾರರು ದಿನಾಚರಣೆಯ ದಿನದಂದು ಆಯಾ ಕಡೆಗಳಲ್ಲಿ ಸಂಚರಿಸಿ ಆಕಸ್ಮಿಕ ಭೇಟಿ ನೀಡಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದಲ್ಲಿ ದಿನಾಚರಣೆ ವಿಶೇಷ ಅರ್ಥ ಬರಲಿದೆ ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಪ್ರತಿಜ್ಞಾವಿಧಿ ಸ್ವೀಕರಿಸಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಂದು ಪೂರ್ವಾಹ್ನ ೧೧ ಗಂಟೆಗೆ ಎಲ್ಲಾ ಸರ್ಕಾರಿ ನೌಕರರು ಕೆಲಸ ನಿರ್ವಹಿಸುವ ಸ್ಥಳದಲ್ಲಿಯೇ ಒಟ್ಟಾಗಿ ಸೇರಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಮಾಣ ವಚನ ಸ್ವೀಕರಿಸಲು ಕಾರ್ಮಿಕ ಇಲಾಖೆಯಿಂದ ಎಲ್ಲ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜೂನ್ ೧೨ರಂದು ಜಿಲ್ಲೆಯ ಪ್ರತಿಯೊಂದು ಗ್ರಾಮಗಳಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್, ಬೀಟ್ ಪೊಲೀಸ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಿಬ್ಬಂದಿ ಒಟ್ಟಾಗಿ ಸೇರಿ ಕಾರ್ಯಕ್ರಮ ಆಚರಣೆ ಮಾಡಿ ಪ್ರಮಾಣ ವಚನ ಸ್ವೀಕರಿಸುವ ಹಾಗೂ ಈ ದಿನದಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಗ್ರಾಮಗಳಲ್ಲಿ ಡಂಗೂರ ಸಾರಿ ಜನಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆಯಿಂದ ಬಿಡುಗಡೆಗೊಂಡು ಶಾಲಾ ಮುಖ್ಯವಾಹಿನಿಗೆ ಸೇರಿಸಿರುವ ಮಕ್ಕಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಡಿಪ್ಲೋಮಾ ನಲ್ಲಿ ಶೇ.೭೫ ಹೆಚ್ಚಿಗೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ದಿನ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಜಿಲ್ಲೆಯ ನಗರಸಭೆ, ಪುರಸಭೆ ಸೇರಿದಂತೆ ಎಲ್ಲಾ ಪಟ್ಟಣ ಪಂಚಾಯತ್‌ಗಳಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಿ ಪ್ರಮಾಣ ವಚನ ಸ್ವೀಕರಿಸಬೇಕು. ಅಲ್ಲದೆ ಕಸ ವಿಲೆವಾರಿ ವಾಹನಗಳಲ್ಲಿ ಉಚಿತವಾಗಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಪುರಸಭೆ ನಗರಸಭೆ ಕಸಿ ವಿಲೇವಾರಿ ವಾಹನಗಳಲ್ಲಿ ಜಿಂಗಲ್ಸ್ ಪ್ರಸಾರಕ್ಕೆ ಅಥವಾ ಘೋಷಣೆಗಳನ್ನು ಕೂಗಿಸುವ ಸೂಕ್ತ ವ್ಯವಸ್ಥೆ ಮಾಡಿಸಲು ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿ ಕ್ರಮ ವಹಿಸಬೇಕು ಎಂದು ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಜೂನ್ ೧೨ರ ಬೆಳಿಗ್ಗೆ ೯ ಗಂಟೆಗೆ ನಗರದ ಗಾಂಧಿ ವನದಿಂದ ಆವರಣದಿಂದ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕಾಲ್ನಡಿಗೆ ಜಾಥಾವು ಅಚ್ಚುಕಟ್ಟಾಗಿ ನಡೆಯಬೇಕು. ಈ ವೇಳೆ ಆಟೋ ಮೈಕಿಂಗ್ ಮೂಲಕ ಘೋಷಣೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಜಾಗೃತಿ ಮೂಡಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸಿದ ಮಕ್ಕಳಿಗೆ ಬಾದಾಮ್ ಹಾಲು,ಹಾಲಿನ ಪೇಡಾ,ಬಿಸ್ಕೆಟ್ ವಿತರಿಸುವ ಸಂಬAಧ ಕೋಮುಲ್ ಮತ್ತು ಸ್ಥಳೀಯ ಕಂಪನಿಗಳೊAದಿಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಾತನಾಡಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಬಂದೋಬಸ್ತಗೆ ಸೂಚನೆ: ಕೋಲಾರ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಡೆಯುವ ಜಾಥಾ, ಪ್ರಭಾತಪೇರಿ ಮತ್ತು ಇನ್ನೀತರ ಕಾರ್ಯಕ್ರಮಗಳಿಗೆ ಜಿಲ್ಲಾ ಪೊಲೀಸ್ ಇಲಾಖೆಯು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೆ ಕ್ರಮ ವಹಿಸಬೇಕು ಎಂದು ಸಭೆಯಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಕೋರಿದರು.
ಜೂನ್ ೧೨ರಂದು ನಡೆಯುವ ನಾನಾ ಕಾರ್ಯಕ್ರಮಗಳ ರೂಪುರೇಷಗಳ ಬಗ್ಗೆ ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್.ವರಲಕ್ಷ್ಮಿ, ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್.ಪಿ.ಬಾಗೇವಾಡಿ, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ನಿಖಿಲ್.ಬಿ, ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ನಟೇಶ್, ಕೋಲಾರ ನಗರಸಭಾ ಆಯುಕ್ತರಾದ ಪ್ರಸಾದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನಮ್ಮ, ಕಾರ್ಮಿಕ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ : ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅಧಿಕಾರಿಗಳ ಪೂರ್ವ ಭಾವಿ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್