ಉಡುಪಿ, 20 ಜೂನ್ (ಹಿ.ಸ.) :
ಆ್ಯಂಕರ್ : ಉಡುಪಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಲಸಿಕಾ ಉಗ್ರಾಣ ಕಟ್ಟಡದ ನಿರ್ಮಾಣ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಗ್ಯಾರಂಟಿ ಯೋಜನಾ ಸಮತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಡಿ. ಹೆಚ್. ಓ ಡಾ. ಬಸವರಾಜ್ ಹುಬ್ಬಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa