ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಬೈಕ್ ಜಾಥ
ಬಳ್ಳಾರಿ, 20 ಜೂನ್ (ಹಿ.ಸ.) : ಆ್ಯಂಕರ್ : ಪ್ರತಿನಿತ್ಯ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷಿ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾ
ಅಂತರಾಷ್ಟ್ರೀಯ ಯೋಗ ದಿನಾಚರಣೆ : ಬೈಕ್ ಜಾಥ


ಬಳ್ಳಾರಿ, 20 ಜೂನ್ (ಹಿ.ಸ.) :

ಆ್ಯಂಕರ್ : ಪ್ರತಿನಿತ್ಯ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷಿ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನಜಾಗೃತಿ ಮೂಡಿಸಲು ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೈಕ್ ಜಾಥಾ ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಬಿಡುವಿನ ಸಮಯದಲ್ಲಿ ಯೋಗಾಭ್ಯಾಸ ಮಾಡಬೇಕು. ಈ ವರ್ಷ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಾವು ಎಂದು ಹೇಳಿದರು.

ಜಾಥಾವು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡು ಎಸ್‍ಪಿ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ – ಗಡಿಗಿ ಚೆನ್ನಪ್ಪ ವೃತ್ತದಿಂದ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊಂಡಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಯೋಗ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande