ಗದಗ, 20 ಜೂನ್ (ಹಿ.ಸ.) :
ಆ್ಯಂಕರ್ : 15ನೇ ಹಣಕಾಸು ಆಯೋಗದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಬ್ಲಾಕ್ ಎಪಿಡೆಮಿಯೋಲಾಜಿಸ್ಟ್, ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಕುರಿತು ಕಾಲಾವಕಾಶ ನೀಡಲಾಗಿದೆ.
ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ 15ನೇ ಹಣಕಾಸು ಆಯೋಗದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಬ್ಲಾಕ್ ಮಟ್ಟದ ಸಾರ್ವಜನಿಕ ಆರೋಗ್ಯ ಘಟಕದ ಬ್ಲಾಕ್ ಎಪಿಡೆಮಿಯೋಲಾಜಿಸ್ಟ್ ಹುದ್ದೆಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್, ಗದಗ ಹಾಗೂ ಅಧ್ಯಕ್ಷರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಗದಗ ಇವರ ಅನುಮೋದನೆ ಮೇರೆಗೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ:11-03-2025 ರಿಂದ 21-03-2025 ರ ಸಂಜೆ 5.30ರ ವರೆಗೆ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸದರಿ ಸ್ವೀಕೃತವಾದ ಅರ್ಜಿಗಳಿಗೆ ರೋಷ್ಟರ್ ಕಂ ಮೆರಿಟ್ ಅಳವಡಿಸಿ ರೋಷ್ಟರ್ ಸಂ.1 ರ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ದಿನಾಂಕ:15-04-2025 ರಿಂದ 17-04-2025 ರವರೆಗೆ ಪರಿಶೀಲಿಸಲಾಗಿದ್ದು, ಮೂಲ ದಾಖಲಾತಿಗಳ ಪರಿಶೀಲನೆಗೆ ಆಹ್ವಾನಿಸಿದ ಅಭ್ಯರ್ಥಿಗಳು ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆಯನ್ನು ಹೊಂದದೇ ಇರುವ ಕಾರಣ ಉಳಿದ 1:18 ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಸದರಿ ಅಭ್ಯರ್ಥಿಗಳಿಗೆ ದಿನಾಂಕ:21-05-2025 ರಿಂದ 23-05-2025 ರವರೆಗೆ ಮೂಲ ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಬ್ಲಾಕ್ ಎಪಿಡೆಮಿಯೋಲಾಜಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿದೆ.
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ದಿನಾಂಕ : 20-06-2025 ರಿಂದ 26-06-2025ರ ವರೆಗೆ ಸಂಜೆ 4.00 ಘಂಟೆಯೊಳಗಾಗಿ ಕಚೇರಿಯ ಸಮಯದಲ್ಲಿ ಜಿಲ್ಲಾ ಕಾರ್ಯಕ್ರಮ ನಿರ್ವಹಣ ಘಟಕ, ಗದಗ ಇಲ್ಲಿ ಲಿಖಿತ ರೂಪದಲ್ಲಿ ನೀಡಲು ಸೂಚಿಸಿದೆ.
ಬ್ಲಾಕ್ ಎಪಿಡೆಮಿಯೋಲಾಜಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP