ಬೆಂಗಳೂರು, 20 ಜೂನ್ (ಹಿ.ಸ.) :
ಆ್ಯಂಕರ್ : ಕಳೆದ ಕೆಲ ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa