ಶಾಸಕ ಬಿ.ಆರ್.ಪಾಟೀಲ ಫೋನ್ ಸಂಭಾಷಣೆ : ಕಾಂಗ್ರೆಸ್ ಭ್ರಷ್ಟಾಚಾರ ಸಾಬೀತು-ರಾಜು ಕುರುಡಗಿ
ಗದಗ, 21 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮತ್ತೊಮ್ಮೆ ರಾಜ್ಯದ ಜನರ ಮುಂದೆ ಸಾಬಿತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎನ್ನುವುದಕ್ಕೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ತಮ್ಮದೇ ಸರ್ಕಾರದ ವಿರುದ್ಧ ಮಾಡಿರುವ ಆರೋಪವೇ ಸಾಕ್
ಪೋಟೋ


ಗದಗ, 21 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮತ್ತೊಮ್ಮೆ ರಾಜ್ಯದ ಜನರ ಮುಂದೆ ಸಾಬಿತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎನ್ನುವುದಕ್ಕೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ತಮ್ಮದೇ ಸರ್ಕಾರದ ವಿರುದ್ಧ ಮಾಡಿರುವ ಆರೋಪವೇ ಸಾಕ್ಷಿಯಾಗಿದೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ರವರು ಆರೋಪಿಸಿದ್ದಾರೆ.

ಅವರಿಂದು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ ವಸತಿ ಇಲಾಖೆಯಲ್ಲಿ ಹಣ ಇಲ್ಲದಿದ್ದರೆ ಅಲ್ಲಿ ಏನೇನೂ ಆಗುವುದಿಲ್ಲಾ ಎಂದು ಆಡಳಿತ ಪಕ್ಷದ ಶಾಸಕರೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಮುಖವಾಡ ರಾಜ್ಯದ ಜನತೆ ಮುಂದೆ ಅನಾವರಣವಾಗಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ, ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ರಾಯರೆಡ್ಡಿ ನೀಡಿದ್ದ ಹೇಳಿಕೆಗೆ ನಿಜವಾಗಿದೆ. ವಸತಿ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಸರಫರಾಜ್ ಗೆ ಕರೆ ಮಾಡಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಹಣ ನೀಡಿದವರಿಗಷ್ಟೆ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಪಟ್ಟಿ ಸಮೇತ ವಿವರಿಸಿದ್ದಾರೆ ಹಾಗು ಈ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರತಿ ಹಂತದಲ್ಲಿಯೂ ಕಮೀಷನ್ ಹಾವಳಿ ಹಾಗು ಭ್ರಷ್ಟಾಚಾರ ಮಿತಿಮೀರಿದೆ. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಆಡಳಿತ ಪಕ್ಷದ ಶಾಸಕರು ಹೇಳಿರುವ ಮಾತುಗಳೆ ಸಾಕ್ಷಿ. ಸ್ವಪಕ್ಷದ ಶಾಸಕರೇ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್‍ಖಾನ್‍ಗೆ ಸ್ಥಾನದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲಾ ಅವರು ಕೂಡಲೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande