ಕಲಬುರಗಿ, 22 ಜೂನ್ (ಹಿ.ಸ.):
ಆ್ಯಂಕರ್ : ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಲಬುರಗಿ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಇದುವರೆಗೂ ಶೌಚಾಲಯವನ್ನು ಹೊಂದಿರದ/ನಿರ್ಮಾಣ ಮಾಡಿಕೊಂಡಿರದ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಮಹಾನಗರ ಪಾಲಿಕೆಯ (ಪರಿಸರ) ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಅರ್ಹ ಮಹಾನಗರ ಪಾಲಿಕೆಯ ವ್ಯಾಪ್ತಿಯ ಸಾರ್ವಜನಿಕರು ಶೌಚಾಲಯ ನಿರ್ಮಾಣಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Samarth biral