ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ
ರಾಯಚೂರು, 23 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನ
ರಾಯಚೂರು: ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ


ರಾಯಚೂರು, 23 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅವರು ಇಂದು ರಾಯಚೂರು ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande