ದೇಶದಾದ್ಯಂತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ನವದೆಹಲಿ, 23 ಜೂನ್ (ಹಿ.ಸ.) : ಆ್ಯಂಕರ್ : ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಜೂನ್ 23 ರಿಂದ 27ರವರೆಗೆ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಲ್ಲಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ಉತ್ತರಾಖಂಡ, ಹಿ
Rain alert


ನವದೆಹಲಿ, 23 ಜೂನ್ (ಹಿ.ಸ.) :

ಆ್ಯಂಕರ್ : ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಜೂನ್ 23 ರಿಂದ 27ರವರೆಗೆ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುವ್ಯ ಭಾರತದಲ್ಲಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ಉತ್ತರಾಖಂಡ, ಹಿಮಾಚಲ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಜೂನ್ 25ರಿಂದ ಮಳೆ ಹೆಚ್ಚಾಗಲಿದೆ. ಪಶ್ಚಿಮ ಮಧ್ಯ ಪ್ರದೇಶದಲ್ಲಿ ಜೂನ್ 23-24ರಂದು ಅತಿ ಹೆಚ್ಚು ಮಳೆಯಾಗುವ ಸಂಭವವಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಜಾರ್ಖಂಡ್, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಜೂನ್ 23-27 ರವರೆಗೆ ಭಾರಿ ಮಳೆಯಾಗಲಿದೆ. ವಿದರ್ಭದಲ್ಲಿ 25-26 ರಂದು ಅತಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ.

ಪಶ್ಚಿಮ ಭಾರತದಲ್ಲಿ ಕೊಂಕಣ, ಗೋವಾ, ಗುಜರಾತ್ ಹಾಗೂ ಮಹಾರಾಷ್ಟ್ರದ ಭಾಗಗಳಲ್ಲಿ ಜೂನ್ 23-29ರೊಳಗೆ ಭಾರಿ ಮಳೆ, ಈಶಾನ್ಯದಲ್ಲಿ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶಗಳಲ್ಲಿ ಜೂನ್ 23-24ರಂದು ಮಳೆಯಾಗಲಿದೆ.

ದಕ್ಷಿಣ ಭಾರತದಲ್ಲಿ ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಲಕ್ಷದ್ವೀಪದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಂಟೆಗೆ 60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande