ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ-2025
ಗದಗ, 26 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ, ಜಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಬೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ವಿಧ
ಪೋಟೋ


ಗದಗ, 26 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾಡಳಿತ, ಜಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಬೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು , ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ್ ಪರಿಷತ್ ಶಾಸಕ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಸಂಸದರಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಶಾಸಕರುಗಳಾದ ಸಿ.ಸಿ.ಪಾಟೀಲ, ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಆಗಮಿಸುವರು.

ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande