ಚಿಕ್ಕಮಗಳೂರು, 27 ಜೂನ್ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.
ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕುಗಳಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಶುಕ್ರವಾರವೂ ಅಧಿಕ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಿರಂತರ ಗಾಳಿ-ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಮುಖ ನದಿಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮಗಳ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ. ರಸ್ತೆ ಕುಸಿತ, ಗುಡ್ಡ ಕುಸಿತ, ಘಟನೆಗಳು ಸಂಭವಿಸುತ್ತಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa