ಹುಬ್ಬಳ್ಳಿ, 27 ಜೂನ್ (ಹಿ.ಸ.) :
ಆ್ಯಂಕರ್ : ಮಕ್ಕಳಿಗೆ ಮಹಾನ್ ವೀರರ ಇತಿಹಾಸವನ್ನು ತಿಳಿಸಿ, ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನು ತಿಳಿಸಬೇಕು. ಸ್ಪರ್ಧಾತ್ಮಕ ಜಗತ್ತಿನತ್ತ ಮಕ್ಕಳು ಸಾಗಬೇಕು
ಎಂದು ಹುಬ್ಬಳ್ಳಿ ನಗರ ತಹಶೀಲ್ದಾರರಾದ ಕಲಗೌಡ ಪಾಟೀಲ ಹೇಳಿದರು.
ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಂಪೇಗೌಡ ಅವರು ಬೆಂಗಳೂರು ನಗರವನ್ನು ಕಟ್ಟಿ ಬೆಳೆಸಿದರು. ಇಂದು ಬೆಂಗಳೂರು ನಗರ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸಿಲಿಕಾನ್ ಸಿಟಿ ಎಂದು ಹೆಸರಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಸವರಾಜ ಹೊಸಮನಿ
ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರಾದ ಜೆ.ಬಿ.ಮಜ್ಜಗಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಬೊಮಕ್ಕನವರ, ತಾಲೂಕ ಪಂಚಾಯತ ವ್ಯವಸ್ಥಾಪಕರಾದ ಶಿವಾನಂದ ನಸಬಿ, ಸಮಾಜದ ಮುಖಂಡರಾದ ಸಂಜೀವ್ ದುಮ್ಮಕನಾಳ, ರಂಜಾನ್ ಕಿಲ್ಲೆದ, ಗೋಪಾಲ್, ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa