ನಾವು ನೀವು ಕ್ರಿಕೆಟ್ ಆಡೋಣ : ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, 27 ಜೂನ್ (ಹಿ.ಸ.) ಆ್ಯಂಕರ್: ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳ ಒಂದು ತಂಡ-ಮಾಧ್ಯಮ ಮಿತ್ರರ ಒಂದು ತಂಡ ರಚಿಸಿ ನಾವು ನೀವು ಕ್ರಿಕೆಟ್ ಆಡೋಣ ಎಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ. ಬಳ್ಳಾರಿ ವಿ.ವಿ ಸಂಘದ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಕಾರ್ಯನಿರತ ಪತ್ರ
ನಾವು ನೀವು ಕ್ರಿಕೆಟ್ ಆಡೋಣ :  ಶಾಸಕ ನಾರಾ ಭರತ್ ರೆಡ್ಡಿ


ನಾವು ನೀವು ಕ್ರಿಕೆಟ್ ಆಡೋಣ :  ಶಾಸಕ ನಾರಾ ಭರತ್ ರೆಡ್ಡಿ


ಬಳ್ಳಾರಿ, 27 ಜೂನ್ (ಹಿ.ಸ.)

ಆ್ಯಂಕರ್: ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳ ಒಂದು ತಂಡ-ಮಾಧ್ಯಮ ಮಿತ್ರರ ಒಂದು ತಂಡ ರಚಿಸಿ ನಾವು ನೀವು ಕ್ರಿಕೆಟ್ ಆಡೋಣ ಎಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ.

ಬಳ್ಳಾರಿ ವಿ.ವಿ ಸಂಘದ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಡಾಕ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯವನ್ನು ಇಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಉದ್ಘಾಟಿಸಿ ನಂತರ ಮಾತನಾಡಿದ ಅವರು ಪತ್ರಕರ್ತರು ಕ್ರೀಡಾ ಚಟುವಟಿಕೆಯಲ್ಲೂ ತೊಡಗಿಸಿಕೊಂಡು ಪಂದ್ಯಾವಳಿ ಆಯೋಜಿಸಿರುವುದು ಸಂತೋಷದ ವಿಷಯ, ಎಂದು ಹೇಳಿದರು.

ಕ್ರಿಕೆಟ್ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 1 ಲಕ್ಷ ರೂ.ಗಳು, ರನ್ನರ್ ಅಪ್ ತಂಡಕ್ಕೆ 50 ಸಾವಿರ ರೂ.ಗಳನ್ನು ವೈಯುಕ್ತಿಕವಾಗಿ ಬಹುಮಾನ ನೀಡುವುದಾಗಿ ಘೋಷಿಸಿದ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾನಿಪ ಪತ್ರಕರ್ತರ ಶ್ರಯೋಭಿವೃದ್ಧಿ ನಿಧಿಗೆ ಮುಂಬರುವ ದಿನಗಳಲ್ಲಿ ದೇಣಿಗೆ ನೀಡುವೆ ಎಂದು ಭರವಸೆ ನೀಡಿದರು.

ಈ ಸಂದರ್ಭ ಮಾಜಿ ಮೇಯರ್ ರಾಜೇಶ್ವರಿ, ಮಹಾನಗರ ಪಾಲಿಕೆಯ ಸದಸ್ಯ ನೂರ್ ಮೊಹಮ್ಮದ್, ಕಾಂಗ್ರೆಸ್ ಮುಖಂಡ ಸುಬ್ಬರಾಯುಡು, ಕಾನಿಪ ಅಡಾಕ್ ಸಮಿತಿಯ ವೀರಭದ್ರಗೌಡ, ಮೋಕ ಮಲ್ಲಯ್ಯ, ವಾರ್ತಾ ಇಲಾಖೆಯ ಅಧಿಕಾರಿ ಗುರುರಾಜ್ ಇದ್ದರು. ಪತ್ರಕರ್ತ ನರಸಿಂಹ ಮೂರ್ತಿ ಕುಲಕರ್ಣಿ ಸ್ವಾಗತಿಸಿ, ವಂದಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande