ಬಿಹಾರದಲ್ಲಿ ಮತದಾರರ ಪಟ್ಟಿ ಪರಿಶೀಲನೆ ಪ್ರಕ್ರಿಯೆ ಆರಂಭ
ನವದೆಹಲಿ, 28 ಜೂನ್ (ಹಿ.ಸ.): ಆ್ಯಂಕರ್: ಭಾರತೀಯ ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ಮತದಾಋ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 7.89 ಕೋಟಿ ಮತದಾರರ ವಿವರಗಳನ್ನು ಪರಿಶೀಲಿಸುವ ಕಾರ್ಯ ಇದೀಗ ಆರಂಭವಾಗಿದೆ. ಈ ಪೈಕಿ
EC


ನವದೆಹಲಿ, 28 ಜೂನ್ (ಹಿ.ಸ.):

ಆ್ಯಂಕರ್:

ಭಾರತೀಯ ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ಮತದಾಋ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 7.89 ಕೋಟಿ ಮತದಾರರ ವಿವರಗಳನ್ನು ಪರಿಶೀಲಿಸುವ ಕಾರ್ಯ ಇದೀಗ ಆರಂಭವಾಗಿದೆ.

ಈ ಪೈಕಿ 4.96 ಕೋಟಿ ಮತದಾರರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರಾಗಿದ್ದು, ಜನವರಿ 1, 2003 ರ ಮೂಲ ದಿನಾಂಕದಂತೆ ಅವರ ವಿವರಗಳನ್ನು ಪುನಃ ದೃಢೀಕರಿಸಲು ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಫಾರ್ಮ್‌ಗಳನ್ನು ವಿತರಿಸಲಾಗುತ್ತಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಈ ಫಾರ್ಮ್‌ಗಳನ್ನು ಆನ್‌ಲೈನ್ ಮೂಲಕವೂ ಭರ್ತಿ ಮಾಡುವ ಅವಕಾಶ ಕಲ್ಪಿಸಲಾಗಿದೆ.

ರಾಜಕೀಯ ಪಕ್ಷಗಳೂ ಈ ಪರಿಶೀಲನಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು, ಈಗಾಗಲೇ 1.54 ಲಕ್ಷ ಬೂತ್ ಏಜೆಂಟ್‌ಗಳನ್ನು ವಿವಿಧ ಪಕ್ಷಗಳು ನೇಮಕ ಮಾಡಿವೆ.

ಮತದಾರರಿಗೆ ನೇರವಾಗಿ ಮಾಹಿತಿ ನೀಡಲು 5.74 ಕೋಟಿ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಎಸ್‌ಎಂಎಸ್ ಕಳುಹಿಸಲಾಗುತ್ತಿದೆ. ಇದರೊಂದಿಗೆ, ಎಲ್ಲಾ ವಿಭಾಗೀಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಪೂರ್ಣ ಸಮಯದ ಪರಿಶೀಲನೆ ಕಾರ್ಯದಲ್ಲಿ ತೊಡಗಲು ಸೂಚನೆ ನೀಡಲಾಗಿದೆ

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande