ಬೆಂಗಳೂರು, 05 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ನಡೆದ ಆರ್ ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ. ಈ ಭೀಕರ ಘಟನೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಕರ್ನಾಟಕ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಸರ್ಕಾರದಿಂದ ಘಟನೆಯ ಕುರಿತು ಪೂರ್ಣ ವರದಿ ಸಲ್ಲಿಸಲು ಸೂಚನೆ ನೀಡಲಾಗಿದ್ದು, ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ನಿಗದಿಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa