ಕಲಬುರಗಿ, 05 ಜೂನ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಓರ್ವ ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅಸಕ್ತಿಯುಳ್ಳ ಸಂಸ್ಥೆಯಿಂದ (ಟೆಂಡರ್) ದರಪಟ್ಟಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರತಿ ತಿಂಗಳು 19,715/- ರೂ. ಗಳ ವೇತನ ನೀಡಲಾಗುತ್ತದೆ. ಭರ್ತಿ ಮಾಡಿದ ಟೆಂಡರ್‍ನ್ನು 2025ರ ಜೂನ್ 10ರ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ಜೂನ್ 11 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಟೆಂಡರ್ ತೆರೆಯಲಾಗುತ್ತದೆ.
ಟೆಂಡರ್‍ಗೆ ಸಂಬಂಧಿಸಿದ ಇತರೆ ಷರತ್ತುಗಳು/ನಿಯಮಾವಳಿ/ನಿಬಂಧನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Samarth biral