ಮೃತಪಟ್ಟವರ ಕುಟುಂಬಸ್ಥರಿಗೆ‌ ಆರ್ ಸಿಬಿ ತಲಾ ೧೦ ಲಕ್ಷ ರೂಪಾಯಿ ಪರಿಹಾರ
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಆರ್ ಸಿಬಿ ತಂಡದವ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದುಃಖ ವ್ಯಕ್ತಪಡಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ‌ ತಲಾ ೧೦ ಲಕ್ಷ ರೂಪಾಯ
Rcb


ಬೆಂಗಳೂರು, 05 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ಆರ್ ಸಿಬಿ ತಂಡದವ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದುಃಖ ವ್ಯಕ್ತಪಡಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ‌ ತಲಾ ೧೦ ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದೆ

ತಂಡದ ಆಗಮನದ ನಿರೀಕ್ಷೆಯಲ್ಲಿ ಅಭಿಮಾನಿಗಳು ಸೇರಿದ್ದಾಗ ನಡೆದಿರುವ ಅನಿರೀಕ್ಷಿತ ಘಟನೆಗಳ ಕುರಿತು ಮಾಧ್ಯಮಗಳ ವರದಿಗಳ ಮೂಲಕ ತಿಳಿದಿದೆ. ಈ ರೀತಿಯ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರವಾಗಿ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ.

ದುರ್ಘಟನೆಯಲ್ಲಿ ಆಗಿರುವ ಜೀವಹಾನಿಗಳಿಗೆ ಆರ್‌ಸಿಬಿ ಫ್ರಾಂಚೈಸಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಮೃತರ ಕುಟುಂಬಗಳಿಗೆ ಸಂತಾಪವನ್ನ ವ್ಯಕ್ತಪಡಿಸುತ್ತದೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ ಮತ್ತು ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರಲು ನಮ್ಮ ಎಲ್ಲಾ ಅಭಿಮಾನಿಗಳಿಗೆ ನಾವು ಮನವಿ ಮಾಡುತ್ತೆವೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande