ಗ್ಯಾಂಗ್ಟಾಕ್, 05 ಜೂನ್ (ಹಿ.ಸ.) :
ಆ್ಯಂಕರ್ : ಉತ್ತರ ಸಿಕ್ಕಿಂನಲ್ಲಿ ಭಾರಿ ಮಳೆ ಹಾಗೂ ಭೂಕುಸಿತದಿಂದ ಸಿಲುಕಿರುವ ಪ್ರವಾಸಿಗರು ಮತ್ತು ಸ್ಥಳೀಯರ ರಕ್ಷಣೆಗೆ ಗುರುವಾರ ಬೆಳಿಗ್ಗೆಯಿಂದ ಕಾರ್ಯಾಚರಣೆ ಆರಂಭವಾಗಿದೆ.
ಪಾಕ್ಯೋಂಗ್‌ನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದಿಂದ ಛಾಟೆನ್‌ಗೆ ಮೂರು ಹೆಲಿಕಾಪ್ಟರ್‌ಗಳು ರವಾನೆಗೊಂಡಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಅಗತ್ಯ ಉಪಕರಣಗಳನ್ನು ತಲುಪಿಸಲಾಗಿದೆ.
ದೂರಸಂಪರ್ಕ ಮತ್ತು ವಿದ್ಯುತ್ ಸೇವೆಗಳ ಪುನಃಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ. ಹವಾಮಾನ ಸುಧಾರಣೆ ಹಿನ್ನೆಲೆಯಲ್ಲಿ ಲಾಚೆನ್ ಸೇರಿ ಹಲವು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ.
ಭೂಕುಸಿತದಿಂದ ರಸ್ತೆಗಳು ಮುಚ್ಚಿ, ಪ್ರವಾಸಿಗರು ಹಾಗೂ ಸ್ಥಳೀಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa