ಸೇಡಂ: ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಲಬುರಗಿ, 05 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೇಡಂ ತಾಲೂಕಿನಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ನಂತರ ಬಾಲಕ/ಬಾಲಕೀಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಹ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಇತರೆ ವಿದ್ಯಾರ್ಥಿಗಳಿಂ
ಸೇಡಂ: ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕಲಬುರಗಿ, 05 ಜೂನ್ (ಹಿ.ಸ.) :

ಆ್ಯಂಕರ್ :

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೇಡಂ ತಾಲೂಕಿನಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ನಂತರ ಬಾಲಕ/ಬಾಲಕೀಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಹ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಇತರೆ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಸೇಡಂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ http://sw.kar.nic.in ವೆಬ್‍ಸೈಟ್‍ನಲ್ಲಿ ಅವಶ್ಯಕ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ 2025ರ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೇಡಂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande