ಲಕ್ನೋ, 05 ಜೂನ್ (ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ 53ನೇ ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಪಕ್ಷದ ಇತರ ಪ್ರಮುಖ ನಾಯಕರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್ನಲ್ಲಿ ಯೋಗಿ ಅವರ ಸೇವೆಯನ್ನು ಪ್ರಶಂಸಿ, ದೇವರು ದೀರ್ಘಾಯುಷ್ಯ ನೀಡಲೆಂದು ಆಶಿಸಿದ್ದಾರೆ.
ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸಹ ಯೋಗಿಯ ನಾಯಕತ್ವವನ್ನು ವರ್ಣಿಸಿ, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಶ್ಲಾಘಿಸಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಸೇರಿದಂತೆ ಹಲವು ನಾಯಕರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa