ಧಾರವಾಡ, 07 ಜೂನ್ (ಹಿ.ಸ.) :
ಆ್ಯಂಕರ್ : ಧಾರವಾಡದ 110 ಕೆ.ವಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಳೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸಂಸ್ಥೆಯು ತುರ್ತು ಪಾಲನಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಅನುಭವಿಸಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ವೇಳೆ, 11 ಕೆವ್ಹಿ ಮಾರ್ಗಗಳಿಂದ ವಿದ್ಯುತ್ ಸರಬರಾಜು ಆಗುವ ಟೋಲ್ನಾಕಾ, ಮಾಳಮಡ್ಡಿ, ರಾಜೀವ ಗಾಂಧಿ ನಗರ, ಗಿರಿನಗರ, ವಿದ್ಯಾಗಿರಿ, ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ, ರಾಯಾಪುರ ಹಾಗೂ ಸುತ್ತಮುತ್ತಲಿನ 60ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.
ಹೆಸ್ಕಾಂ ಜನತೆಗೆ ತೊಂದರೆ ಆಗದಂತೆ ಸಹಕಾರ ಕೋರಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ವಿನಂತಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa