ಗೋರಖ್‌ಪುರ, 01 ಜುಲೈ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಉತ್ತರ ಪ್ರದೇಶದ ಗೋರಖ್‌ಪುರದ ಪಿಪ್ರಿ ಪ್ರದೇಶದಲ್ಲಿ ಸ್ಥಾಪಿತವಾಗಿರುವ ರಾಜ್ಯದ ಮೊದಲ ಆಯುಷ್ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿದರು. 52 ಎಕರೆ ಜಾಗದಲ್ಲಿ ನಿರ್ಮಿತ ಈ ಸಂಸ್ಥೆಯ ನಿರ್ಮಾಣಕ್ಕೆ ₹267.50 ಕೋಟಿಗಳನ್ನು ವೆಚ್ಚ ಮಾಡಲಾಗಿದೆ.
ಆಯುರ್ವೇದ, ಯುನಾನಿ ಹಾಗೂ ಹೋಮಿಯೋಪಥಿ ವೈದ್ಯಕೀಯ ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಇದೀಗ ಪಂಚಕರ್ಮ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳನ್ನೂ ಒದಗಿಸಲಾಗುತ್ತಿದೆ. ಈ ವಿಶ್ವವಿದ್ಯಾಲಯ ವೈದ್ಯಕೀಯ ಶಿಕ್ಷಣಕ್ಕೆ ಬಲ ನೀಡುವುದರ ಜೊತೆಗೆ, ಔಷಧೀಯ ಸಸ್ಯಗಳ ಬೇಡಿಕೆಯನ್ನು ಹೆಚ್ಚಿಸುವ ಮೂಲಕ ಕೃಷಿಕ್ಷೇತ್ರಕ್ಕೂ ಪ್ರೋತ್ಸಾಹ ನೀಡಲಿದೆ.
ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa