ರವೀಂದ್ರ ಚವಾಣ್ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
ಮುಂಬಯಿ, 01 ಜುಲೈ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ರವೀಂದ್ರ ಚವಾಣ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಮುಂಬೈನ ವರ್ಲಿ ಡೋಮ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ದೇವೇಂದ್
Bjp


ಮುಂಬಯಿ, 01 ಜುಲೈ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ರವೀಂದ್ರ ಚವಾಣ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಮುಂಬೈನ ವರ್ಲಿ ಡೋಮ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ನಿರ್ಗಮಿತ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಚವಾಣ್ ಅವರು ಇತ್ತೀಚೆಗೆ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದೀಗ ಪೂರ್ತಿಯಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಇತರರು ಅರ್ಜಿ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು.

ರಾಜಕೀಯ ಪಯಣ : ಡೊಂಬಿವಲಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದ ಚವಾಣ್ ಅವರು ಬಿಜೆಪಿ ಯುವಮೋರ್ಚಾದ ಮೂಲಕ ರಾಜಕೀಯ ಪ್ರವೇಶಿಸಿದ್ದು, ಕೌನ್ಸಿಲರ್, ಸ್ಥಾಯಿ ಸಮಿತಿ ಅಧ್ಯಕ್ಷ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಆರ್‌ಎಸ್‌ಎಸ್ ಸ್ವಯಂಸೇವಕರಾಗಿ ಆರಂಭಿಸಿದ ಅವರ ರಾಜಕೀಯ ಜೀವನ ಈಗ ಮಹಾರಾಷ್ಟ್ರ ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ತಲುಪಿದೆ.

ಮುಂಬರುವ ಪುರಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಈ ನೇಮಕಾತಿ ಮಹತ್ವಪೂರ್ಣವಾದುದಾಗಿದೆ. ಕಾರ್ಯಕರ್ತರೊಂದಿಗೆ ಅವರ ಬಲವಾದ ಸಂಪರ್ಕ ಹಾಗೂ ಸಂಘಟನಾ ಶಕ್ತಿ ಪಕ್ಷಕ್ಕೆ ಶಕ್ತಿ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande