ಬಳ್ಳಾರಿ, 01 ಜುಲೈ (ಹಿ.ಸ.) :
ಆ್ಯಂಕರ್ : ಗೋಜಿರಿಯೋ ಕರಾಟೆ ಡು ಕೆನ್ರೋ ಖಾನ್ ಕರಾಟೆ ಸಂಸ್ಥೆಯಿಂದ ಹುಬ್ಬಳ್ಳಿ ತಾಲ್ಲೂಕಿನ ಗುಂಚಿ ಗ್ರಾಮದ ಬಸವೇಶ್ವರ ಭವನದಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಳ್ಳಾರಿಯ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನಿ ಕೆ.ಎಚ್. ಮೌನಿಕ ಅವರಿಗೆ ಬಹುಮಾನ ಲಭಿಸಿದೆ.
ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಶಾಲಾ ಮುಖ್ಯ ಗುರುಗಳು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ಶುಭ ಹಾರೈಸಿದ್ದಾರೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್