ರಾಜಕೀಯ ಬಿಟ್ಟು ಶಿಕ್ಷಕರು ನಿಷ್ಠೆಯಿಂದ ಕೆಲಸ ಮಾಡಬೇಕು: ಸಚಿವ ಸಂತೋಷ ಲಾಡ್
ಧಾರವಾಡ, 01 ಜುಲೈ (ಹಿ.ಸ.) : ಆ್ಯಂಕರ್ : ಎಸ್‌ಎಸ್‌ಎಲ್‌ಸಿ ಫಲಿತಾಂಶ ತೃಪ್ತಿಕರವಾಗಿಲ್ಲದ ಹಿನ್ನೆಲೆ, ಶಿಕ್ಷಕರು ರಾಜಕೀಯ ವಿಚಾರಗಳನ್ನು ಬದಿಗಿಟ್ಟು ನಿಷ್ಠೆಯಿಂದ ಕೆಲಸ ಮಾಡಿದಾಗ ಶಾಲೆಗಳ ಗುಣಮಟ್ಟ ಉತ್ತಮವಾಗಬಹುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಜಿಲ್ಲಾಡಳಿತ, ಜಿಲ್ಲ
Lad


ಧಾರವಾಡ, 01 ಜುಲೈ (ಹಿ.ಸ.) :

ಆ್ಯಂಕರ್ : ಎಸ್‌ಎಸ್‌ಎಲ್‌ಸಿ ಫಲಿತಾಂಶ ತೃಪ್ತಿಕರವಾಗಿಲ್ಲದ ಹಿನ್ನೆಲೆ, ಶಿಕ್ಷಕರು ರಾಜಕೀಯ ವಿಚಾರಗಳನ್ನು ಬದಿಗಿಟ್ಟು ನಿಷ್ಠೆಯಿಂದ ಕೆಲಸ ಮಾಡಿದಾಗ ಶಾಲೆಗಳ ಗುಣಮಟ್ಟ ಉತ್ತಮವಾಗಬಹುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ 'ಬದಲಾವಣೆಯ ಶಿಕ್ಷಣ; ಭವಿಷ್ಯದ ನಿರ್ಮಾಣ 2025-26' ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಶಿಕ್ಷಕರ ಜವಾಬ್ದಾರಿ ಹೆಚ್ಚಾಗಿದ್ದು, ಪೋಷಕರ ಸಹಕಾರವೂ ಅಗತ್ಯವಿದೆ ಎಂದರು. ಮಕ್ಕಳಲ್ಲಿ ಕೌಶಲ್ಯ, ನೈತಿಕತೆ, ಜ್ಞಾನ ಬೆಳೆಯುವಲ್ಲಿ ಶಿಕ್ಷಕರು ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ಮಿಷನ್ ವಿದ್ಯಾಕಾಶಿ ಯೋಜನೆ ಪರಿಣಾಮಕಾರಿ ಆಗಿದ್ದು, ಶೇ.100 ಹಾಜರಾತಿ ಹಾಗೂ ಗುಣಮಟ್ಟದ ಶಿಕ್ಷಣದ ಮೂಲಕ ಮುಂದಿನ ವರ್ಷ ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 100% ಫಲಿತಾಂಶ ಪಡೆದ ಶಾಲಾ ಮುಖ್ಯಗುರುಗಳು ಹಾಗೂ ಜಿಲ್ಲೆಗೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande