ಬಳ್ಳಾರಿ, 10 ಜುಲೈ (ಹಿ.ಸ.) :
ಆ್ಯಂಕರ್ : ನಗರದ ಮಿಲ್ಲರ್ ಪೇಟೆಯ ಕೋರ್ಟ್ ಮೊಹಲ್ಲಾ ಹತ್ತಿರ ನಿವಾಸಿಯಾದ ಅಬ್ದುಲ್ ಖಾಲಿದ್(54) ಜು.05 ರಂದು ಕಾಣೆಯಾಗಿದ್ದು, ಈ ಕುರಿತು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5.8 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಬಲಕಣ್ಣಿನ ಹುಬ್ಬಿನ ಮೇಲೆ ಒಂದು ಪುಲ್‍ಪುರೆ ಇರುತ್ತದೆ. ಬಾಯಿಯಲ್ಲಿ ಕೋರೆಹಲ್ಲು ಬಿದ್ದಿದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿಗೀರಿ ಇರುವ ಕಪ್ಪು ಬಣ್ಣದ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಉರ್ದು, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಐ ಮೊ. 9480803045 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್