ಕೊಪ್ಪಳ, 10 ಜುಲೈ (ಹಿ.ಸ.) :
ಆ್ಯಂಕರ್ : ವಾಣಿಜ್ಯ ಪರೀಕ್ಷೆಗಳು ಜುಲೈ 14 ರಿಂದ ಜು. 23ರ ವರೆಗೆ ಕೊಪ್ಪಳದ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ವಾಣಿಜ್ಯ ಪರೀಕ್ಷೆಗಳು ಜು. 14 ರಿಂದ ಜು. 23ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಪ್ಪಳ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ವಿಭಾಗ ಆವರಣ) ಜರುಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್