ಬೆಂಗಳೂರು, 11 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬೆಂಗಳೂರು ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಒಂದು ವಾರದೊಳಗೆ ವಕೀಲರ ಸಂಘದ ಕಟ್ಟಡಕ್ಕೆ ಸೋಲಾರ್ ಗ್ರಿಡ್ ವ್ಯವಸ್ಥೆ ಒದಗಿಸಲು ಪರಿಶೀಲನೆ ನಡೆಸಲಾಗುವುದು. ಇದರ ಬಗ್ಗೆ ಹಿಂದೆಯೇ ಮಾತುಕತೆಯಾಗಿತ್ತು. ನೀವು ಅಧಿಕಾರಿಗಳ ಹಿಂದೆ ಬಿದ್ದು ಕೆಲಸ ಮಾಡಿಸಿಕೊಳ್ಳಬೇಕು. ಜೊತೆಗೆ ಈ ಸಂಸ್ಥೆಗೆ ಭೂಮಿ ಬೇಕು ಎಂದು ಹೇಳಿದ್ದೀರಿ. ಆದ ಕಾರಣಕ್ಕೆ 10 ಎಕರೆ ಕಂದಾಯ ಭೂಮಿಯನ್ನು ಲಭ್ಯತೆ ನೋಡಿಕೊಂಡು ನೀಡಲಾಗುವುದು. ನಗರದ 20 ಕಿ.ಮೀ. ವ್ಯಾಪ್ತಿಯಲ್ಲಿ ಭೂಮಿ ಇದ್ದರೆ ನೀವೇ ಹುಡುಕಿ. ನಾವು ನೀಡುವ ಹಣವನ್ನು ನಿಮಗೆ ಉಪಯೋಗವಾಗುವ ಉತ್ತಮ ಕೆಲಸಗಳಿಗೆ ವಿನಿಯೋಗಿಸಿ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa