ಕೊಪ್ಪಳ : ಮೀನು ಕೃಷಿಕರ ದಿನಾಚರಣೆ
ಕೊಪ್ಪಳ, 11 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮೀನುಗಾರಿಕೆ ಇಲಾಖೆಯ ವತಿಯಿಂದ ಗುರುವಾರದಂದು ಜಿಲ್ಲಾ ಕೃಷಿ ವಿಸ್ತರಣಾ ಕೇಂದ್ರದ ಸಭಾಂಗಣದಲ್ಲಿ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮೀನು ಕೃಷಿಕರಿಗೆ ಈ ದಿನ
ಕೊಪ್ಪಳ : ಮೀನು ಕೃಷಿಕರ ದಿನಾಚರಣೆ


ಕೊಪ್ಪಳ, 11 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮೀನುಗಾರಿಕೆ ಇಲಾಖೆಯ ವತಿಯಿಂದ ಗುರುವಾರದಂದು ಜಿಲ್ಲಾ ಕೃಷಿ ವಿಸ್ತರಣಾ ಕೇಂದ್ರದ ಸಭಾಂಗಣದಲ್ಲಿ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮೀನು ಕೃಷಿಕರಿಗೆ ಈ ದಿನಾಚರಣೆಯ ಮಹತ್ವ ಮತ್ತು ಮೀನುಗಾರಿಕೆ ಬಗ್ಗೆ ಮಾಹಿತಿ ನೀಡಿ, 2024-25 ನೇ ಸಾಲಿನ Coffee Table Book ಎಂಬ ಇಲಾಖೆಯ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕರಾದ ಡಾ.ಮಲ್ಲಯ್ಯ, ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದ ಮುಂದಾಳು ಡಾ. ರವಿ, ಜಿಲ್ಲಾ ಪಂಚಾಯತ್ ಓಂಬುಡ್ಸ್ಮನ್ ವೀರಣ್ಣ ಕಮತರ್, ಜಿಲ್ಲಾ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಕೊಪ್ಪಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ಬಸವರಾಜ್ ಪಾಟೀಲ್, ಗಂಗಾವತಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ಆನಂದ್ ಪಾಟೀಲ್ ಹಾಗೂ ಮೀನುಗಾರಿಕೆ ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಜಿಲ್ಲೆಯ ವಿವಿಧ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಮೀನುಗಾರರ ಸಹಕಾರ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande