ಕಡಿಮೆ ಅವಧಿಯಲ್ಲಿ ಹೆಚ್ಚಿನ ರೈಲುಗಳ ಮಂಜೂರು : ಸಚಿವ ವಿ.ಸೋಮಣ್ಣ
ಬಳ್ಳಾರಿ, 11 ಜುಲೈ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದಾಗಿನಿ0ದ ರೈಲ್ವೇ ಇಲಾಖೆಯಲ್ಲಿ ಕ್ರಾಂತಿಕಾರ ಅಭಿವೃದ್ಧಿ ನಡೆದಿವೆ. ನಾನು ಅಧಿಕಾರ ವಹಿಸಿಕೊಂಡ ಕಡಿಮೆ ಅವಧಿಯಲ್ಲಿ ರಾಜ್ಯ ಸೇರಿ ಹಲವು ಕಡೆಗಳಲ್ಲಿ ಹೆಚ್ಚಿನ ರೈಲುಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಾಜ್ಯ ರೈಲ್ವ
ಕಡಿಮೆ ಅವಧಿಯಲ್ಲಿ ಹೆಚ್ಚಿನ ರೈಲುಗಳ ಮಂಜೂರು:  ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ


ಕಡಿಮೆ ಅವಧಿಯಲ್ಲಿ ಹೆಚ್ಚಿನ ರೈಲುಗಳ ಮಂಜೂರು:  ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ


ಬಳ್ಳಾರಿ, 11 ಜುಲೈ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದಾಗಿನಿ0ದ ರೈಲ್ವೇ ಇಲಾಖೆಯಲ್ಲಿ ಕ್ರಾಂತಿಕಾರ ಅಭಿವೃದ್ಧಿ ನಡೆದಿವೆ. ನಾನು ಅಧಿಕಾರ ವಹಿಸಿಕೊಂಡ ಕಡಿಮೆ ಅವಧಿಯಲ್ಲಿ ರಾಜ್ಯ ಸೇರಿ ಹಲವು ಕಡೆಗಳಲ್ಲಿ ಹೆಚ್ಚಿನ ರೈಲುಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಾಜ್ಯ ರೈಲ್ವೇ ಖಾತೆ ಮಂತ್ರಿ ವಿ.ಸೋಮಣ್ಣ ತಿಳಿಸಿದ್ದಾರೆ.

ಬಳ್ಳಾರಿಯ ರೈಲ್ವೇ ಸ್ಟೇಷನ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ನರೇಂದ್ರ ಮೋದಿ ಅವರ ಕನಸಿನಂತೆ ರೈಲ್ವೆ ಇಲಾಖೆಯಿಂದ ಕ್ರಾಂತಿಕಾರ ಕೆಲಸಗಳು ಆಗುತ್ತಿವೆ. ೧೦ ವಂದೇಭಾರತ ರೈಲು ಓಡಿಸಲಾಗುತ್ತಿದೆ. ಇನ್ನು ಹೆಚ್ಚು ಮಾಡಲಾಗುತ್ತಿದ್ದು ಸ್ಲೀಪರ್ ವಂದೇಭಾರತ ರೈಲು ಶೀಘ್ರ ಆರಂಭಿಸಲಾಗುತ್ತದೆ. ಯುಪಿಎ ಸರಕಾರದಲ್ಲಿ ನೆನೆಗುದಿಗೆ ಬಿದ್ದ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಯುಪಿಎ ಸರಕಾರದಲ್ಲೇ ಕೇವಲ ೩೩೦೦ ಕೆಳ, ಮೇಲ್ಸೆತುವೆಗಳನ್ನು ನಿರ್ಮಾಣ ಮಾಡಿದ್ದರು.

ನಾವು ಅಧಿಕಾರಕ್ಕೆ ಬಂದ ಬಳಿಕ ೬೬೦೦ ಕ್ಕೂ ಹೆಚ್ಚು ಬ್ರಿಜ್ ಕಟ್ಟಿದ್ದೇವೆ. ಇದರಿಂದ ಬಹುತೇಕ ರೈಲ್ವೆ ಸಮಸ್ಯೆಗಲು ಮುಗಿಯುತಿವೆ. ಇಂದು ಚಿಕ್ಕಮಗಳೂರು ತಿರುಪತಿ ಹೊಸ ರೈಲು ಉದ್ಘಾಟನೆ ಮಾಡಲಾಗಿದೆ. ನಾಲ್ಜೈದು ಹೊಸ ರೈಲುಗಳನ್ನ ರಾಜ್ಯದಲ್ಲಿ ಈಗ ಓಡಿಸಲಾಗುತ್ತಿದೆ. ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾದ್ಮೇಲ ಕರ್ನಾಟಕವೂ ಅಭಿವೃದ್ಧಿಯಾಗಬೇಕಿದೆ. ಇದೇ ಕಾರಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿದೆ. ಲೆವೆಲ್ ಕ್ರಾಸಿಂಗ್ ಬಗ್ಗೆ ರೈಲ್ವೆ ಇಲಾಖೆಗೆ ದೊಡ್ಡ ತಲೆನೋವಾಗಿತ್ತು. ಈಗ ಹಂತ-ಹAತವಾಗಿ ಪರಿಹಾರ ಮಾಡಲಾಗಿದೆ.

ಚಿಕ್ಕಜಾಜೂರು-ಬಳ್ಳಾರಿ ರೈಲ್ವೆ ಡಬಲಿಂಗ್ ಕಾಮಗಾರಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿತ್ತು. ಇದಕ್ಕಾಗಿ ಕೇಂದ್ರ ಸರಕಾರ ೩೩೦೦ ಕೋಟಿ ರೂ. ನೀಡಲಾಗಿದೆ. ಕೆಲಸವೂ ಆರಂಭವಾಗಲಿದೆ. ಅಮೃತ ಸ್ಟೇಷನ್ ಯೋಜನೆಯಡಿ ಹಲವು ಕಡೆಗಳಲ್ಲಿ ರೈಲ್ವೇ ಸ್ಟೇಷನ್‌ಗಳ ಆಧುನೀಕರಣ ಕೈಗೆತ್ತಿಕೊಳ್ಳಲಾಗಿದೆ. ದೇಶದ ಚಿತ್ರಣ ಬದಲಾವಣೆ ಮಾಡೋದಕ್ಕಾಗಿ ಮೋದಿ ಅವರು ಕರ್ನಾಟಕಕ್ಕೂ ಆದ್ಯತೆ ಕೊಡ್ತಿದ್ದಾರೆ. ದೇಶ ಅಭಿವೃದ್ಧಿ ಆದ್ರೆ ಸಾಮಾನ್ಯ ಬಡವನಿಗೂ ಎಲ್ಲಾ ಹಕ್ಕಿದೆ ಎನ್ನುವುದನ್ನು ಪ್ರಧಾನಿ ಮೋದಿ ಅವರು ತೋರಿಸಿದ್ದಾರೆ. ನಾನು ದೇಶದ ತುಂಬಾ ಓಡಾಡ್ತಿದ್ದೀನಿ. ನನ್ನಾಸೆ ಈ ದೇಶಕ್ಕೆ ಒಳ್ಳೆಯದು ಆಗಬೇಕು. ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು. ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ಕೊಡಬೇಕು ಎನ್ನುವುದಿದೆ ಎಂದು ಹೇಳಿದರು.

ಎಲ್ಲದಕ್ಕೂ ಕಾಯಕಲ್ಪ: ಬಳ್ಳಾರಿ ಜಿಲ್ಲೆಯ ಸುತ್ತ ೪೦ ಕೀ.ಮೀ. ಎಲ್ಲೂ ಕೂಡ ರೈಲ್ವೆ ಹಳಿ ಕ್ರಾಸ್‌ಗಳು ಇರದಂತೆ ಎಲ್ಲ ಕಡೆಗೂ ಎಲ್‌ಒಬಿ, ಆರ್‌ಒಬಿಗಳನ್ನು ನಿರ್ಮಾಣ ಮಾಡಲು ಪ್ಲಾö್ಯನ್ ಮಾಡಲಾಗುತ್ತದೆ. ಶೀಘ್ರವೇ ನಾನು ಈ ಬಗ್ಗೆ ಆದೇಶ ಹೊರಡಿಸಿ ಸರ್ವೆ ಮಾಡಲು ಸೂಚನೆ ನೀಡುತ್ತೇನೆ. ನಾನು ಬಂದಾಗಿನಿAದ ಬಳ್ಳಾರಿಯ ಎಲ್ಲ ಕೆಲಸಗಳಿಗೂ ಆದ್ಯತೆ ನೀಡಲಾಗಿದೆ. ರೈಲ್ವೇ ಆಧುನೀಕರಣ ಕಾಮಗಾರಿ ಭರದಿಂದ ನಡೆದಿದೆ. ಕೆಲವು ಕಡೆ ಸಮಸ್ಯೆ ಇರುವುದನ್ನು ಗಮನಕ್ಕೆ ತಂದಿದ್ದಿರಿ ಕೂಡಲೇ ವಿಚಾರಿಸಿ ಎಲ್ಲವನ್ನೂ ಸರಿ ಮಾಡುತ್ತೇನೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande