ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಭುವನೇಶ್ವರ, 11 ಜುಲೈ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಾಡಿದಂತೆ ಬಿಹಾರದಲ್ಲಿ ಮುಂಬರುವ ಚುನಾವಣೆಗಳನ್ನು ಹೈಜಾಕ್ ಮಾಡಲು ಬಿಜೆಪಿ ತಂತ್ರ ರೂಪಿಸಿದೆ ಎಂದು ಆರೋಪಿಸಿದ್ದಾರೆ. ಒಡಿಶಾದ
Rahul


ಭುವನೇಶ್ವರ, 11 ಜುಲೈ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಾಡಿದಂತೆ ಬಿಹಾರದಲ್ಲಿ ಮುಂಬರುವ ಚುನಾವಣೆಗಳನ್ನು ಹೈಜಾಕ್ ಮಾಡಲು ಬಿಜೆಪಿ ತಂತ್ರ ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ 'ಸಂವಿಧಾನ್ ಬಚಾವೊ ಸಮಾವೇಶ'ದಲ್ಲಿ ಮಾತನಾಡಿದ ಅವರು, ಬಿಜೆಪಿ ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ ಎಂದು ಆರೋಪಿಸಿದ್ದು, ಬಿಹಾರ ವಿಧಾನ ಸಭಾ ಚುನಾವಣೆಯನ್ನು ಬಿಜೆಪಿ 'ಹೈಜಾಕ್' ಮಾಡುವುದನ್ನು ತಡೆಯಲು ಇಂಡಿಯಾ ಒಕ್ಕೂಟದ ಪಕ್ಷಗಳು ನಿರ್ಧರಿಸಿವೆ ಎಂದು ಹೇಳಿದರು.

ಭಾರತೀಯ ಚುನಾವಣಾ ಆಯೋಗ ತನ್ನ ಕರ್ತವ್ಯ ನಿರ್ವಹಿಸದೇ ಬಿಜೆಪಿಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಬಂಡವಾಳಶಾಹಿಗಳಿಗಾಗಿ ಸರ್ಕಾರವನ್ನು ನಡೆಸುತ್ತದೆ. ಇದು ದೇಶದ ಸಾಮಾನ್ಯ ಜನರಿಗೆ ಕೆಲಸ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande