ಚಿಕ್ಕ ಸಂಸಾರ ಆದ್ಯತೆಯಾಗಲಿ : ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು
ಬಳ್ಳಾರಿ, 11 ಜುಲೈ (ಹಿ.ಸ.) : ಆ್ಯಂಕರ್ : ಜನಸಂಖ್ಯೆ ನಿಯಂತ್ರಣಕ್ಕಾಗಿ ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಪುರುಷ ಮತ್ತು ಮಹಿಳೆಯರಿಗೆ ಶಾಶ್ವತ ಶಸ್ತçಚಿಕಿತ್ಸಾ ವಿಧಾನಗಳು ಲಭ್ಯವಿದ್ದು, ಚಿಕ್ಕ ಸಂಸಾರಕ್ಕೆ ಆದ್ಯತೆ ನೀಡಲು ಪ್ರತಿಯೊಬ್ಬರು ಮುಂದೆ ಬರಬೇಕು ಜಿಲ್ಲಾ ಆರೋಗ್ಯ ಮತ್ತು ಕು
ವಿಶ್ವ ಜನಸಂಖ್ಯಾ ದಿನಾಚರಣೆ ಚಿಕ್ಕ ಸಂಸಾರ ಆದ್ಯತೆಯಾಗಲಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು


ವಿಶ್ವ ಜನಸಂಖ್ಯಾ ದಿನಾಚರಣೆ ಚಿಕ್ಕ ಸಂಸಾರ ಆದ್ಯತೆಯಾಗಲಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು


ಬಳ್ಳಾರಿ, 11 ಜುಲೈ (ಹಿ.ಸ.) :

ಆ್ಯಂಕರ್ : ಜನಸಂಖ್ಯೆ ನಿಯಂತ್ರಣಕ್ಕಾಗಿ ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಪುರುಷ ಮತ್ತು ಮಹಿಳೆಯರಿಗೆ ಶಾಶ್ವತ ಶಸ್ತçಚಿಕಿತ್ಸಾ ವಿಧಾನಗಳು ಲಭ್ಯವಿದ್ದು, ಚಿಕ್ಕ ಸಂಸಾರಕ್ಕೆ ಆದ್ಯತೆ ನೀಡಲು ಪ್ರತಿಯೊಬ್ಬರು ಮುಂದೆ ಬರಬೇಕು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಟುಂಬ ಕಲ್ಯಾಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಹೆಚ್ಚುತ್ತಿರುವ ಜನಸಂಖ್ಯೆಯು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ದಿಯಲ್ಲಿ ಅನೇಕ ತೊಂದರೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ದಂಪತಿಗಳು ಚಿಕ್ಕ ಸಂಸಾರಕ್ಕೆ ಆದ್ಯತೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಲ್ಯಾಪ್ರೊಸ್ಕೋಪಿಕ್ ಮತ್ತು ಟ್ಯುಬೆಕ್ಟಮಿ ಶಸ್ತçಚಿಕಿತ್ಸೆ ಮೂಲಕ ಇಲ್ಲಿಯವರೆಗೆ 10528 ಮಹಿಳಾ ಫಲಾನುಭವಿಗಳಿಗೆ ಶಸ್ತçಚಿಕಿತ್ಸೆ ಮಾಡಲಾಗಿದೆ. ಗಾಯವಿಲ್ಲದ, ಹೊಲಿಗೆ ಇಲ್ಲದ ನೋ ಸ್ಕಾಲ್‌ಪೇಲ್ ವೆಸಕ್ಟಮಿ ಶಸ್ತçಚಿಕಿತ್ಸೆಯನ್ನು ಇಲ್ಲಿಯವರೆಗೆ 03 ಜನ ಫಲಾನುಭವಿಗಳಿಗೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿಯನ್ನು ನೀಡಲಾಗುತ್ತಿದ್ದು, ಕುಟುಂಬದಲ್ಲಿ ಆಪ್ತಸಮಾಲೋಚನೆ ಮೂಲಕ ಶಸ್ತçಚಿಕಿತ್ಸೆ ಕುರಿತು ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚೆಗೆ ಬಂದ ಗರ್ಭ ನಿರೋಧಕ ಚುಚ್ಚುಮದ್ದು ಅಂತರ ಇಂಜೆಕ್ಷನ್‌ಅನ್ನು 4389 ಫಲಾನುಭವಿಗಳಿಗೆ ನೀಡಲಾಗಿದ್ದು, ಪ್ರತಿ 3 ತಿಂಗಳಿಗೊಮ್ಮೆ ಚುಚ್ಚುಮದ್ದು ಮೂಲಕ ಪಡೆಯಬಹುದಾದ ಚುಚ್ಚುಮದ್ದು ಇದಾಗಿದೆ. ಇಲ್ಲಿಯವರೆಗೆ 3650 ಮಹಿಳೆಯರಿಗೆ ವಂಕಿ ಅಳವಡಿಸಲಾಗಿದೆ. ನುಂಗುವ ಮಾತ್ರೆಗಳನ್ನು 10614 ಮಹಿಳಾ ಫಲಾನುಭವಿಗಳಿಗೆ ವಿತರಿಸಲಾಗಿದೆ.

ವಿಶೇಷವಾಗಿ ಹೆರಿಗೆಯಾದ ತಕ್ಷಣ 48 ಗಂಟೆ ಒಳಗಡೆ ಬಾಣಂತಿಗೆ ಅಳವಡಿಸುವ ಪಿಪಿಐಯುಸಿಡಿ (ವಂಕಿ) ಅನ್ನು 5585 ಮಹಿಳೆಯರಿಗೆ ಅಳವಡಿಸಲಾಗಿದೆ. ಪುರುಷರಿಗೆ ನಿರೋಧ್ ಲಭ್ಯವಿದ್ದು, 18328 ಫಲಾನುಭವಿಗಳಿಗೆ ನಿರೋಧ್ ವಿತರಿಸಿ ಜಿಲ್ಲೆಯಲ್ಲಿ ಜನಸಂಖ್ಯೆ ನಿಯಂತ್ರಿಸಲು ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪ್ರಭಾರಿ ಕುಟುಂಬ ಕಲ್ಯಾಣಾಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ‘ತಾಯಿ ಆಗುವ ವಯಸ್ಸು: ದೇಹ ಮತ್ತು ಮನಸ್ಸಿನ ಸಿದ್ಧತೆ’ ಎಂಬುದು ಈ ವರ್ಷದ ಘೋಷವಾಕ್ಯವಾಗಿದ್ದು, ಮದುವೆ ನಂತರ ಕನಿಷ್ಟ ಮೂರು ವರ್ಷಗಳವರೆಗೆ ಮಕ್ಕಳಾಗುವುದನ್ನು ತಡೆಗಟ್ಟುವುದು, ಎರಡು ಮಕ್ಕಳಿಗೆ ಸಂತಾನ ನಿಯಂತ್ರಿಸುವುದು, ಒಂದು ಮಗುವಿನ ನಂತರ ಕನಿಷ್ಟ ಮೂರು ವರ್ಷ ಅಂತರವಿಡುವುದು. ಕುಟುಂಬ ಕಲ್ಯಾಣ ಪದ್ಧತಿ ಅಳವಡಿಸಿಕೊಳ್ಳುವಂತೆ ಸೂಚಿಸಲಾಗುತ್ತಿದ್ದು, ಎಲ್ಲಾ ರೀತಿಯಿಂದ ಜನಸಂಖ್ಯೆ ಸ್ಥಿರತೆಯನ್ನು ಕಾಪಾಡಿ ದೇಶದ ಸಮಗ್ರ ಅಭಿವೃದ್ದಿಯಲ್ಲಿ ಪಾಲುದಾರರಾಗೋಣ ಎಂದು ತಿಳಿಸಿದರು.

ಜಾಥಾವು ಜಿಲ್ಲಾ ಆಸ್ಪತ್ರೆಯ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಸಂಗA ವೃತ್ತದವರೆಗೆ ಬಂದು ಮರಳಿ ಜಿಲ್ಲಾ ಆಸ್ಪತ್ರೆಯ ಆವರಣಕ್ಕೆ ಕೊನೆಗೊಂಡಿತು. ಜಾಥಾದಲ್ಲಿ ಜಾಗೃತಿ ಫಲಕಗಳಿಂದ ಮತ್ತು ಭಿತ್ತಿಚಿತ್ರಗಳಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಇದೇ ವೇಳೆ ಕುಟುಂಬ ಕಲ್ಯಾಣ ವಿಧಾನಗಳ ಕುರಿತ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ಬಳಿಕ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಸಿಎಸಿ ಎಫ್‌ಡಬ್ಲ್ಯು ಕಲ್ಸ್ಲ್ಟಂಟ್ ದೊಡ್ಡನಗೌಡ, ಡಾ.ಸುರೇಶ ಕುಮಾರ, ಡಾ.ಪ್ರಿಯಾಂಕ, ಎಎಸ್‌ಓ ಮಹಾದೇವಿ, ಗೋಪಾಲ್ ಕೆ.ಹೆಚ್., ಬಿಹೆಚ್‌ಇಓ ಶಾಂತಮ್ಮ, ಬಿಪಿಎಮ್ ಮೇಘರಾಜ್, ಹೆಚ್‌ಐಓ ಮುಸ್ತಾಕ್ ಅಹ್ಮದ್, ಹುಲಿಗೇಶ್, ಹಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಗಂಗಮ್ಮ, ಉಷಾರಾಣಿ, ನೇತ್ರಾ, ಸೈನಿಕ ಕಲ್ಯಾಣ ಸಂಘದ ಪ್ರಲ್ಹಾದ್‌ರೆಡ್ಡಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಇತರರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande