ನವದೆಹಲಿ, 12 ಜುಲೈ (ಹಿ.ಸ.) :
ಆ್ಯಂಕರ್ : ದೆಹಲಿಯ ವೆಲ್ಕಮ್ ಪ್ರದೇಶದ ಜನತಾ ಕಾಲೋನಿಯಲ್ಲಿ ಶನಿವಾರ ಬೆಳಿಗ್ಗೆ ನಾಲ್ಕು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದ ಈ ಘಟನೆಯಲ್ಲಿ ಎಂಟು ಜನರನ್ನು ರಕ್ಷಿಸಲಾಗಿದೆ. ಸುಮಾರು 10–12 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಧಾವಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಹಾಗೂ ದೆಹಲಿ ಪೊಲೀಸರು ಸ್ಥಳದಲ್ಲಿದ್ದು, ತೀವ್ರ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡ ಹಳೆಯದಾಗಿದ್ದು, ಬಿರುಕುಗಳು ಕಾಣಿಸುತ್ತಿದ್ದವೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa