ಪಾಲಿಕೆ ನೌಕರರ ಬೇಡಿಕೆ ಈಡೇರಿಸಲು ವಿಜಯೇಂದ್ರ ಒತ್ತಾಯ
ಬೆಂಗಳೂರು, 12 ಜುಲೈ (ಹಿ.ಸ.) : ಆ್ಯಂಕರ್ : ಮಹಾನಗರ ಪಾಲಿಕೆಗಳ ನೌಕರರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಸಾರ್ವಜ
ಪಾಲಿಕೆ ನೌಕರರ ಬೇಡಿಕೆ ಈಡೇರಿಸಲು ವಿಜಯೇಂದ್ರ ಒತ್ತಾಯ


ಬೆಂಗಳೂರು, 12 ಜುಲೈ (ಹಿ.ಸ.) :

ಆ್ಯಂಕರ್ : ಮಹಾನಗರ ಪಾಲಿಕೆಗಳ ನೌಕರರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ನೌಕರರ ಪ್ರತಿಭಟನೆಯಿಂದಾಗಿ ಸಾರ್ವಜನಿಕರಿಗೆ ಸರ್ಕಾರಿ ಸೇವೆ ಪಡೆಯುವಲ್ಲಿ ಸಮಸ್ಯೆಗಳಾಗುತ್ತಿದೆ. ಸರ್ಕಾರ ಈ ಕೂಡಲೇ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande