ಎಸ್‍ಸಿಪಿ, ಟಿಎಸ್‍ಪಿ ಅನುದಾನ ಬಳಸಿರಿ : ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ
ರಾಯಚೂರು, 12 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿನ ಮಟ್ಟದಲ್ಲಿದ್ದು, ಈ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್‍ಸಿಪಿ, ಟಿಎಸ್‍ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರ
ಎಸ್‍ಸಿಪಿ, ಟಿಎಸ್‍ಪಿ ಅನುದಾನ ಬಳಿಸಿರಿ : ಕ್ರಮ: ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ


ಎಸ್‍ಸಿಪಿ, ಟಿಎಸ್‍ಪಿ ಅನುದಾನ ಬಳಿಸಿರಿ : ಕ್ರಮ: ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ


ಎಸ್‍ಸಿಪಿ, ಟಿಎಸ್‍ಪಿ ಅನುದಾನ ಬಳಿಸಿರಿ : ಕ್ರಮ: ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ


ರಾಯಚೂರು, 12 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿನ ಮಟ್ಟದಲ್ಲಿದ್ದು, ಈ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್‍ಸಿಪಿ, ಟಿಎಸ್‍ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 2025ರ ಜೂನ್ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೌಲಭ್ಯಗಳನ್ನು ಒದಗಿಸಲು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಿ ಪಟ್ಟಿ ಮಾಡಬೇಕು. ಅರ್ಜಿಗಳನ್ನು ಆಹ್ವಾನಿಸಿದ್ದಲ್ಲಿ ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಕೈಗೊಂಡು ಪಟ್ಟಿ ಸಿದ್ಧಪಡಿಸಬೇಕು. ಫಲಾನುಭವಿಗಳಿಗೆ ಆದಷ್ಟು ಶೀಘ್ರವೇ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಪ್ರತಿ ಇಲಾಖೆಗೆ ಪರಿಶಿಷ್ಟರ ಕಾರ್ಯಕ್ರಮಗಳಿಗಾಗಿ ಪ್ರತ್ಯೇಕವಾಗಿ ಹಣ ನಿಗದಿಯಾಗುತ್ತದೆ. ಫಲಾನುಭವಿಗಳ ಗುರಿಯೂ ನಿರ್ಧಾರವಾಗಿರುತ್ತದೆ. ಆದರೂ ವಿಳಂಬವಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಸುವುದು ಸರಿಯಲ್ಲ. ಆದಷ್ಟು ಮುಂಚಿತವಾಗಿಯೇ ಗುರಿಗೆ ಅನುಸಾರ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಈ ಕಾರ್ಯದಲ್ಲಿ ವಿಳಂಬ ಮಾಡಬಾರದು ಎಂದರು.

ಶೋಷಿತ ಸಮಾಜದ ಮೇಲೆ ಕಾಳಜಿವಹಿಸಿ ಸರ್ಕಾರವು ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನುದಾನ ಮೀಸಲಿಡುತ್ತದೆ. ಇದನ್ನು ಅಧಿಕಾರಿಗಳು ಅರಿಯಬೇಕು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗ ಹೆಚ್ಚಾಗಿದ್ದು, ಅವರಿಗೆ ಈ ಅನುದಾನ ಸಹಾಯಕ್ಕೆ ಬರಬೇಕು. ಎಸಿಪಿ, ಟಿಎಸ್‍ಪಿ ಅನುದಾನವು ಬಳಕೆಯಾಗದೆ ಮರಳಿ ಹೋಗದಂತೆ ಎಚ್ಚರ ವಹಿಸಬೇಕು. ಕಾಮಗಾರಿಗಳನ್ನು ನಿರ್ದಿಷ್ಟ ಸಮಯದಲ್ಲಿ ಮುಗಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಜನಾಂಗಕ್ಕೆ ಕ್ರೀಡಾ ಇಲಾಖೆಯಿಂದ ವಾಲಿಬಾಲ್, ಅಥ್ಲೆಟಿಕ್ಸ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು. ಸ್ಪರ್ಧೆಯಲ್ಲಿ ವಿಜೇತರಾದ ಅವರಿಗೆ ಉತ್ತಮ ರೀತಿ ತರಬೇತಿ ನೀಡಿ ಅವರಿಗೆ ಪೆÇ್ರೀತ್ಸಾಹ ನೀಡಬೇಕು. ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುತ್ತದೆ. ಯುವಕರು ಮಾದಕ ವಸ್ತುಗಳ ಸೇವನೆಯಿಂದ ಹೊರಬರಲು ಕ್ರೀಡೆ ಬಗ್ಗೆ ಹೆಚ್ಚಿನ ಆಸಕ್ತಿ ಬರುವಂತೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ರೈತರಿಗೆ ರೇμÉ್ಮ ಬೆಳೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಕುರಿತು ಅವರಿಗೆ ಮನವರಿಕೆ ಮಾಡಬೇಕು. ರೇμÉ್ಮ ಬೆಳೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರು ಮಾತನಾಡಿ, ಸ್ವಸಹಾಯ ಸಂಘಗಳ ಸದಸ್ಯರನ್ನು ಸೇರಿಸಿ ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯ ಬಗ್ಗೆ ತಿಳಿಸಬೇಕು. ಜಿಲ್ಲೆಯಲ್ಲಿ ಮೀನು ಸಾಗಾಣಿಕೆ ಪ್ರಮಾಣವನ್ನು ಹೆಚ್ಚಿಸಲು ಸಂಬಂಧಿಸಿದ ಅಧಿಕಾರಿಗಳು ಟೆಂಡರ್ ಪ್ರಕ್ರಿಯೆ ನಡೆಸಿ ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ, ಪಂಚಾಯತ್ ರಾಜ್ ಇಂಜನಿಯರ ವಿಭಾಗದ ಸಹಾಯಕ ಅಭಿಯಂತರರಾದ ಚಂದ್ರಕಲಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧಿಕಾರಿ ರಾಜೇಂದ್ರ ಜಲ್ದಾರ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರವಿ ಸೇರಿದಂತೆ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande