ಹಾಸನ, 13 ಜುಲೈ (ಹಿ.ಸ.) :
ಆ್ಯಂಕರ್ : ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸರ್ವರಿಗೂ ಸೂರು ಒದಗಿಸಲು 01-09-2024 ರಿಂದ ಅನ್ವಯವಾಗುವಂತೆ ವಸತಿ ಸೌಲಭ್ಯಗಳನ್ನು ಜಾರಿಗೊಳಿಸಿದ್ದು ಬೇಲೂರು ಪುರಸಭಾ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವ ಅಥವಾ ಕಚ್ಚಾ ಮನೆ ಹೊಂದಿರುವ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರವು Unified web portal ನಲ್ಲಿ ಜು.15 ರ ಒಳಗಾಗಿ ವಸತಿ ರಹಿತ ಮತ್ತು ನಿವೇಶನ ರಹಿತ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಕರ್ನಾಟಕ ಒನ್ ಹಾಗೂ ಸೈಬರ್ ಸೆಂಟರ್‌ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಬೇಲೂರು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08177-222221 ಸಂಪರ್ಕಿಸಲು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa