ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಸವ ಜಯ ಮೃತ್ಯುಂಜಯ ಸ್ವಾಮಿ ಗುಡುಗು
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮಿ ಹೇಳಿದರು. ವಿಜಯಪುರ ನಗರದ ಶಿವಾನುಭವ ಮಂಟಪದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ ಕೂಡಲಸಂಗಮ ವಿಜಯಪುರ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ ರಾಜ್ಯ ಕಾರ್ಯ
ಸ್ವಾಮಿ


ವಿಜಯಪುರ, 13 ಜುಲೈ (ಹಿ.ಸ.) :

ಆ್ಯಂಕರ್ : ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮಿ ಹೇಳಿದರು.

ವಿಜಯಪುರ ನಗರದ ಶಿವಾನುಭವ ಮಂಟಪದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ ಕೂಡಲಸಂಗಮ ವಿಜಯಪುರ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ ರಾಜ್ಯ ಕಾರ್ಯಕಾರಿಣಿ ಚಿಂತನಾ ಸಭೆಯಲ್ಲಿ ಮಾತನಾಡಿದರು.

ಬೆಳಗಾವಿಯಲ್ಲಿ ಹೋರಾಟದ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಜಾರ್ಜ್ ಮಾಡಿಸಿತ್ತು. ಇದೀಗ ಕೋರ್ಟ್ ತನಿಖೆಗೆ ಆದೇಶ ಮಾಡಿದ್ದು, ಸಂತಸ ತಂದಿದೆ ಎಂದರು.

ಅಲ್ಲದೇ, ಪಂಚಮಸಾಲಿ ಹೋರಾಟಕ್ಕೆ ವಕೀಲರು ಸಹ ಬೆಂಬಲ ನೀಡಿದ್ದಾರೆ. ಇನ್ನು ಜಾತಿ ಗಣತಿ ಮಾಡುವ ಹಕ್ಕು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಅದಕ್ಕಾಗಿ ಜಾತಿ ಗಣತಿಯನ್ನು ಸೂಕ್ಷ್ಮವಾಗಿ ಅರ್ಥಪೂರ್ಣವಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಪಂಚಮಸಾಲಿ ಮುಖಂಡರು, ನಾಯಕರು, ವಕೀಲರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande