ನಾಳೆ ಮುಖ್ಯಮಂತ್ರಿ ಆಗಮನ : ಪೂರ್ವಭಾವಿ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ವಿಧಾನ ಸಭಾ ಕ್ಷೇತ್ರದ ನಾನಾ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ನಾಳೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಭಾ
ಡಿಸಿ


ವಿಜಯಪುರ, 13 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ವಿಧಾನ ಸಭಾ ಕ್ಷೇತ್ರದ ನಾನಾ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ನಾಳೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಭದ್ರತಾ ವ್ಯವಸ್ಥೆ,ವೇದಿಕೆ ವ್ಯವಸ್ಥೆ, ಉದ್ಘಾಟನೆಗೊಳ್ಳಲಿರುವ ಬೃಹತ್ ವಾಣಿಜ್ಯ ಸಂಕೀರ್ಣ ಸ್ಥಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಇಂಡಿ ಡಿವೈಎಸ್ಪಿ ಜಗದೀಶ,ಇಂಡಿ ತಹಶೀಲ್ದಾರರಾದ ಬಿ.ಎಸ್.ಖಡಕ್ ಭಾವಿ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande