ಹೈದರಾಬಾದ್, 13 ಜುಲೈ (ಹಿ.ಸ.) :
ಆ್ಯಂಕರ್ : ಹಿರಿಯ ತೆಲುಗು ನಟ ಮತ್ತು ಮಾಜಿ ಶಾಸಕ ಕೋಟಾ ಶ್ರೀನಿವಾಸ್ ರಾವ್ ಅವರ ನಿಧನಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ತಮ್ಮ ಶೋಕ ಸಂದೇಶದಲ್ಲಿ, ಕೋಟಾ ರಾವ್ ಅವರನ್ನು ಬಹುಮುಖ ಪ್ರತಿಭೆಯುಳ್ಳ ಕಲಾವಿದ, ಜನಪ್ರಿಯ ನಾಯಕ ಹಾಗೂ ನಿಷ್ಠಾವಂತ ಸಾರ್ವಜನಿಕ ಸೇವಕರಾಗಿದ್ದರು ಎಂದು ಶ್ಲಾಘಿಸಿದ್ದಾರೆ. ನಟನಾ ಕ್ಷೇತ್ರದ ಜೊತೆಗೆ ರಾಜಕೀಯದಲ್ಲಿಯೂ ಅವರು ಗಮನಾರ್ಹ ಕೊಡುಗೆ ನೀಡಿದ್ದನ್ನು ಸ್ಮರಿಸಿದ್ದಾರೆ.
“ಅವರು ನನ್ನ ರಾಜಕೀಯ ಜೀವನದಲ್ಲಿ ಮಾರ್ಗದರ್ಶಕರಾಗಿದ್ದರು. ನನ್ನ ಹೋರಾಟಗಳಿಗೆ ಸದಾ ಬೆಂಬಲ ನೀಡುತ್ತಿದ್ದರು. ಅವರ ನಿಧನ ನಮ್ಮ ಪಕ್ಷಕ್ಕೂ ಚಿತ್ರರಂಗಕ್ಕೂ ತುಂಬಲಾರದ ನಷ್ಟ,” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಕೋಟಾ ರಾವ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa