ವಿಜಯಪುರ, 13 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ನಡೆಸಿದರು.
ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಫಂಡಿಂಗ್ ಮಾಡುತ್ತಿದೆ ಎಂದು ಆರೋಪಿಸಿದರು.
ಅಲ್ಲದೇ, ಮಹಾರಾಷ್ಟ್ರ ಚುನಾವಣೆಯಲ್ಲೂ ಹಣ ನೀಡಿದೆ. ವಾಲ್ಮೀಕಿ ನಿಗಮದಲ್ಲಿ ಬೃಹತ್ ಭ್ರಷ್ಟಾಚಾರ ಮಾಡಿದ್ದು, ಇದೀಗ ಸಿಬಿಐ ತನಿಖೆಗೆ ನೀಡಲಾಗಿದೆ ಎಂದರು.
ಕರ್ನಾಟಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿ ಮಾಡಿದೆ ಎಂದು ಕಿಡಿಕಾರಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande