ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿ ; 19,041 ಪ್ರಕರಣ ಇತ್ಯರ್ಥ
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು, ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅನವಶ್ಯಕವಾಗಿ ವ್ಯರ್ಥವಾಗುವ ಹಣ ಮತ್ತು ಸಮಯದ ಉಳಿತಾಯವಾಗುವುದರಿಂದ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋ
ಲೋಕ್ ಅದಾಲತ್


ವಿಜಯಪುರ, 13 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು, ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅನವಶ್ಯಕವಾಗಿ ವ್ಯರ್ಥವಾಗುವ ಹಣ ಮತ್ತು ಸಮಯದ ಉಳಿತಾಯವಾಗುವುದರಿಂದ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಗೌರವಾನ್ವಿತ ಎಮ್. ಐ. ಅರುಣ ಕರೆ ನೀಡಿದರು.

ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಭಾಗವಹಿಸಿ, ಸುಮಾರು 10 ಜೋಡಿಗಳು ರಾಜೀ ಸಂಧಾನದ ಮೂಲಕ ವೈವಾಹಿಕ ಜೀವನ ನಡೆಸಲು ಪರಸ್ಪರ ಒಪ್ಪಿಕೊಂಡಿರುವ ಕುರಿತು ಮತ್ತು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ರಾಜೀ ಆದ ಪ್ರಕರಣಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲ್ಲಿ ಕಕ್ಷಿದಾರರಿಗೆ ತಿಳುವಳಿಕೆ ನೀಡಿದ ಪ್ರಧಾನ ಜಿಲ್ಲಾ ಮತು ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ. ಅವರು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗಿದ್ದ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಅಮಲ್ಜಾರಿ ಪ್ರಕರಣಗಳು ಸೇರಿದಂತೆ ಒಟ್ಟು 19,041 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಸಾಯಬಣ್ಣ ಹಾಗರಗಿ ಅವರು ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡು ಪರಸ್ಪರ ಸೌಹಾರ್ದತೆಯಿಂದ ಸಮಾಜದಲ್ಲಿ ಜೀವನ ಸಾಗಿಸುವಂತೆ ಸಲಹೆ ನೀಡಿದರು.

ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಒಳಗೊಂಡು ಸುಮಾರು 10 ಜೋಡಿಗಳನ್ನು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ವೈವಾಹಿಕ ಜೀವನ ನಡೆಸಲು ಒಪಿಸಲಾಯಿತು ಎಂದು ಹೇಳಿದರು.

ಜನತಾ ನ್ಯಾಯಾಲಯದ ಯಶಸ್ಸಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ಪೊಲೀಸ್ ಅಧಿಕಾರಿಗಳು-ಸಿಬ್ಬಂದಿ ಉತ್ತಮವಾಗಿ ಸಹಕರಿಸಿದ್ದು ವಿಶೇಷವಾಗಿತ್ತು.

ಈ ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಸಹಭಾಗಿಯಾದ ಸಾರ್ವಜನಿಕರಿಗೆ, ಕಕ್ಷಿದಾರರಿಗೆ, ಪಕ್ಷಗಾರರ ಪರ ವಕೀಲರುಗಳಿಗೆ ಸಹಕರಿಸಿದ ಎಲ್ಲರ ಸಹಕಾರಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಹರೀಶ ಎ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande