ನವದೆಹಲಿ, 13 ಜುಲೈ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯ ಸಭೆಗೆ ನಾಮನಿರ್ದೇಶನ ಮಾಡಿರುವ ನಾಲ್ವರು ಗಣ್ಯ ವ್ಯಕ್ತಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಅವರು ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಈ ನಾಲ್ವರು ಗಣ್ಯರ ಸಾಧನೆಗಳನ್ನು ಶ್ಲಾಘಿಸಿ, ದೇಶದ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಅಮೂಲ್ಯ ಎಂದು ಪ್ರಶಂಸಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa