ಹಾಸನ, 13 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು. ಸೇವಾ ಸಿಂಧೂ ವೆಬ್ ಸೈಟ್ https://sevasindhugs.karnataka.gov.inನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಹಾಗೂ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಈಗಾಗಲೇ ನೋಂದಾಯಿಸಿಕೊAಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ಮೂರು ತಿಂಗಳಿಗೊಮ್ಮೆ 25ನೇ ದಿನಾಂಕದೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕಾಗಿರುತ್ತದೆ. ಜೂನ್, ಜುಲೈ, ಆಗಸ್ಟ್ ಮಾಹೆಯ ಸ್ವಯಂ-ಘೋಷಣೆಯನ್ನು ಆಗಸ್ಟ್ ತಿಂಗಳಿನ 25ನೇ ದಿನಾಂಕದೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:- 08172-296374, ನ್ನು ಸಂಪರ್ಕಿಸುವಂತೆ ಹಾಸನ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa