ನಾಳೆ ಹುಬ್ಬಳ್ಳಿಯಲ್ಲಿ ಶಕ್ತಿ ಯೋಜನೆ ಸಂಭ್ರಮ
ಹುಬ್ಬಳ್ಳಿ, 13 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆ 500 ಕೋಟಿ ಪ್ರಯಾಣಿಕರ ಲೆಕ್ಕವನ್ನು ದಾಟಿರುವ ಹಿನ್ನೆಲೆಯಲ್ಲಿ, ಜುಲೈ 14, 2025 ರಂದು ರಾಜ್ಯದಾದ್ಯಂತ ಶಕ್ತಿ ಸಂಭ್ರಮ ಆಚರಿಸಲು ನಿರ್ಧರಿಸಲಾಗಿದೆ. 2023ರ ಜೂನ್ 11ರಂದು ಜಾರಿಗೆ
ನಾಳೆ ಹುಬ್ಬಳ್ಳಿಯಲ್ಲಿ ಶಕ್ತಿ ಯೋಜನೆ ಸಂಭ್ರಮ


ಹುಬ್ಬಳ್ಳಿ, 13 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆ 500 ಕೋಟಿ ಪ್ರಯಾಣಿಕರ ಲೆಕ್ಕವನ್ನು ದಾಟಿರುವ ಹಿನ್ನೆಲೆಯಲ್ಲಿ, ಜುಲೈ 14, 2025 ರಂದು ರಾಜ್ಯದಾದ್ಯಂತ ಶಕ್ತಿ ಸಂಭ್ರಮ ಆಚರಿಸಲು ನಿರ್ಧರಿಸಲಾಗಿದೆ.

2023ರ ಜೂನ್ 11ರಂದು ಜಾರಿಗೆ ಬಂದು, ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಲಿಂಗ ತೃತೀಯಪಂಥೀಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಿದ ಈ ಯೋಜನೆಯು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತ ಪ್ರಯಾಣದ ಮೂಲಕ ಅನೇಕರ ಜೀವನದಲ್ಲಿ ನಿಗದಿತ ಬದಲಾವಣೆ ತಂದಿದೆ.

ಈ ನಿಟ್ಟಿನಲ್ಲಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಶಹರದ ಹೊಸುರ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 10:30ಕ್ಕೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಬಸ್‌ಗಳಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಲು ತೀರ್ಮಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಬೆಳಗಾವಿ ವಿಭಾಗದ ಉಸ್ತುವಾರಿ ಎಸ್.ಆರ್. ಪಾಟೀಲ, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಶ್ಯಾನಪ್ಪಗೌಡ ಆರ್. ಪಾಟೀಲ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande