ವಿಜಯಪುರ, 13 ಜುಲೈ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಖಾತೆ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ನಾಳೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಸೋಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 11-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‍ಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ಹಾಗೂ ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಇಂಡಿ ವಿಧಾನ ಸಭಾ ಮತಕ್ಷೇತ್ರದ ನಾನಾ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಹಾಗೂ ಲಿಂಬೆ ಅಭಿವೃದ್ದಿ ಮಂಡಳಿಯ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4-00ಕ್ಕೆ ಇಂಡಿಯಿಂದ ಹೊರಟು ಸೋಲಾಪುರ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande