ನಕಲಿ ರಸಗೊಬ್ಬರಗಳ ವಿರುದ್ಧ ಕೇಂದ್ರದಿಂದ ಕಟ್ಟುನಿಟ್ಟಿನ ಅಭಿಯಾನ
ನವದೆಹಲಿ, 13 ಜುಲೈ (ಹಿ.ಸ.) : ಆ್ಯಂಕರ್ : ನಕಲಿ ಹಾಗೂ ಕಳಪೆ ಗುಣಮಟ್ಟದ ರಸಗೊಬ್ಬರಗಳ ವಿರುದ್ಧ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಎಲ್ಲಾ ರಾಜ್ಯಗಳಿಗೆ ವಿಶೇಷ ಅಭಿಯಾನ ಆರಂಭಿಸಲು ಸೂಚನೆ ನೀಡಿದ್ದಾರೆ. ರೈತರಿಗೆ ಗುಣಮಟ್ಟದ ಗೊಬ್ಬರ ಲಭ್ಯವಾ
Agri


ನವದೆಹಲಿ, 13 ಜುಲೈ (ಹಿ.ಸ.) :

ಆ್ಯಂಕರ್ : ನಕಲಿ ಹಾಗೂ ಕಳಪೆ ಗುಣಮಟ್ಟದ ರಸಗೊಬ್ಬರಗಳ ವಿರುದ್ಧ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಎಲ್ಲಾ ರಾಜ್ಯಗಳಿಗೆ ವಿಶೇಷ ಅಭಿಯಾನ ಆರಂಭಿಸಲು ಸೂಚನೆ ನೀಡಿದ್ದಾರೆ.

ರೈತರಿಗೆ ಗುಣಮಟ್ಟದ ಗೊಬ್ಬರ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದು, ನಿಯಮಿತ ತಪಾಸಣೆ, ಮಾದರಿ ಪರೀಕ್ಷೆ ಹಾಗೂ ಕಠಿಣ ಕಾನೂನು ಕ್ರಮಗಳ ಜಾರಿಗೆ ಸೂಚನೆ ನೀಡಲಾಗಿದೆ. ನ್ಯಾನೋ ಅಥವಾ ಜೈವಿಕ ಉತ್ಪನ್ನಗಳ ಬಲವಂತದ ಟ್ಯಾಗಿಂಗ್ ನಿಲ್ಲಿಸಲು, ಹಾಗೂ ಕಪ್ಪು ಮಾರುಕಟ್ಟೆ ನಿಯಂತ್ರಣಕ್ಕೆ ರಾಜ್ಯಗಳಿಗೆ ಸೂಚಿಸಲಾಗಿದೆ.

ಅಭಿಯಾನದಲ್ಲಿ ರೈತರು ಹಾಗೂ ಸಂಘಟನೆಗಳನ್ನು ಭಾಗವಹಿಸಲು ಪ್ರೋತ್ಸಾಹಿಸಿ, ಜಾಗೃತಿ ಮೂಡಿಸುವಂತೆ ಕೇಂದ್ರ ಸಚಿವರು ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande